HomeBreaking NewsLatest NewsPoliticsSportsCrimeCinema

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ:  ಡಿಸಿ ಕಚೇರಿ ಮುತ್ತಿಗೆಗೆ ಯತ್ನ

12:39 PM Jun 28, 2024 IST | prashanth

ಮಂಗಳೂರು,ಜೂನ್,28,2024 (www.justkannada.in): ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿತು.

ಮಂಗಳೂರಿನಲ್ಲಿ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಈ ವೇಳೆ ಪೊಲೀಸರು ಪ್ರತಿಭಟನಾಕಾರರ ಮಧ್ಯೆ ನೂಕಾಟ ತಳ್ಳಾಟ ನಡೆದಿದ್ದು,  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಶಾಸಕರಾದ ವೇದವ್ಯಾಸ ಕಾಮತ್, ಭಗಿರತಿ, ಸೇರಿದಂತೆ ಬಿಜೆಪಿ ಅನೇಕ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

 

Key words: mangalore, BJP, protest, CM, Siddaramaiah

Tags :
BJP- protest -resignation - CM Siddaramaiah
Next Article