ಇನ್ಮುಂದೆ 8 ವರ್ಷ ಮೀರಿದ್ರೆ 1ನೇ ತರಗತಿ ಪ್ರವೇಶವಿಲ್ಲ: ಗರಿಷ್ಠ ವಯೋಮಿತಿ ಗೊಂದಲಕ್ಕೆ ತೆರೆ
05:05 PM Jul 13, 2024 IST
|
prashanth
ಬೆಂಗಳೂರು,ಜುಲೈ,13,2024 (www.justkannada.in): ಎಲ್ ಕೆಜಿ, ಯುಕೆಜಿ ಮತ್ತು 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆ ಅಧಿಕೃತ ತೆರೆ ಎಳೆದಿದೆ.
ಎಲ್ ಕೆಜಿ, ಯುಕೆಜಿ ಹಾಗೂ 1ನೇ ತರಗತಿ ಮಕ್ಕಳ ಪ್ರವೇಶಕ್ಕೆ ವಯೋಮಿತಿ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಎಲ್ ಕೆಜಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 4-6 ವರ್ಷ, ಯುಕೆಜಿ ಪ್ರವೇಶಕ್ಕೆ 5ರಿಂದ 7 ವರ್ಷ ನಿಗದಿ ಮಾಡಲಾಗಿದೆ.
ಹಾಗೆಯೇ 1ನೇ ತರಗತಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 6-8 ವರ್ಷ ನಿಗದಿ ಪಡಿಸಲಾಗಿದೆ. ಹೀಗಾಗಿ ಇನ್ಮುಂದೆ 8 ವರ್ಷ ಮೀರಿದ್ರೆ 1ನೇ ತರಗತಿ ಪ್ರವೇಶವಿರುವುದಿಲ್ಲ . 8 ವರ್ಷ ಮೀರಿದರೂ ಶಾಲೆಗೆ ಸೇರದ ಮಕ್ಕಳನ್ನು ಶಾಲೆ ಬಿಟ್ಟ ಮಕ್ಕಳು ಎಂದು ಪರಿಗಣಿಸಲಾಗುತ್ತದೆ. ಅಲ್ಲದೇ ಅಂತಹ ಮಕ್ಕಳನ್ನು ಅವರ ವಯಸ್ಸಿಗೆ ತಕ್ಕಂತೆ ತರಗತಿಗಳ ಪ್ರವೇಶ ನೀಡಲಾಗುತ್ತದೆ. ಈ ಮೂಲಕ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಇದ್ದ ವಯೋಮಿತಿ ಗೊಂದಲ ನಿವಾರಣೆಯದಂತಾಗಿದೆ.
Key words: maximum, age limit, admission, 1st class
Next Article