ರಾಜ್ಯದ ಜನತೆಗೆ ಮತ್ತೆ ಬೆಲೆ ಏರಿಕೆಯ ಬಿಸಿ: ಹಾಲಿನ ದರ 2 ರೂ. ಹೆಚ್ಚಳ
12:05 PM Jun 25, 2024 IST
|
prashanth
ಬೆಂಗಳೂರು,ಜೂನ್,25,2024 (www.justkannada.in): ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯದ ಜನತೆಗೆ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಹಾಲಿನ ದರವನ್ನ ಹೆಚ್ಚಳ ಮಾಡಲಾಗಿದೆ.
ನಂದಿನಿ ಹಾಲಿನ ದರ ಹೆಚ್ಚಿಸಿ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಕುರಿತು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು. ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇದ್ದು ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದ್ದಾರೆ.
ಈ ಮೂಲಕ ಪ್ರತಿ ಲೀಟರ್ ಹಾಲಿನ ದರವನ್ನು 2.10 ರೂಗೆ ಹೆಚ್ಚಿಸಿ ಕೆಎಂಎಫ್ ಹೆಚ್ಚಿಸಿ ಆದೇಶ ಹೊರಡಿಸಿದೆ. ಮೊದಲೇ ಬೆಲೆ ಏರಿಕೆಯ ಬಿಸಿಯಲ್ಲಿರುವ ರಾಜ್ಯದ ಜನತೆ ಮತ್ತೆ ದರ ಏರಿಕೆಯ ಬರೆ ಎಳೆಯಲಾಗಿದೆ.
Key words: milk, price, hike, KMF
Next Article