ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಹತ್ಯೆ ಕೇಸ್: ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ.
ಬೆಂಗಳೂರು,ನವೆಂಬರ್,6,2023(www.justkannada.in): ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಿರಣ್ ಎಂಬಾತ ಪೊಲೀಸರು ವಶಕ್ಕೆ ಪಡೆದ ವ್ಯಕ್ತಿ. ಈ ಹಿಂದೆ ಪ್ರತಿಮಾ ಕಾರು ಚಾಲಕನಾಗಿದ್ದ ಕಿರಣ್ ಎನ್ನುವವರನ್ನ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಿರಣ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.
ಕಿರಣ್ ಕಳೆದ ಐದು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಮಾಡುತ್ತಿದ್ದ. ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕರಾಗಿದ್ದರು. ಆದರೆ ಪ್ರತಿಮಾ ಅವರು ಕಿರಣ್ ನನ್ನು ಕೆಲಸದಿಂದ ತೆಗೆದುಹಾಕಿದ್ದರು.
Key words: Mines-Geology –Department- officer - murder –case-arrested