For the best experience, open
https://m.justkannada.in
on your mobile browser.

ನೆರೆ ಹಾವಳಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ, ಪರಿಶೀಲನೆ: ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ

02:44 PM Aug 02, 2024 IST | prashanth
ನೆರೆ ಹಾವಳಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ  ಪರಿಶೀಲನೆ  ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ

ದಕ್ಷಿಣ ಕನ್ನಡ,ಆಗಸ್ಟ್,2,2024 (www.justkannada.in):  ಭಾರಿ ಮಳೆಯಿಂದಾಗಿ ತತ್ತರಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಹಾವಳಿ ಪ್ರದೇಶಗಳಿಗೆ ಆರೋಗ್ಯ  ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಭಾರೀ ಮಳೆಯಿಂದಾಗಿ ಮಂಗಳೂರಿನ ಮುಳುಗಡೆ ಸ್ಥಳಗಳಿಗೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರವ್ ಪರಿಶೀಲಿಸಿದರು. ಅದ್ಯಪಾಡಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಚಿವ ದಿನೇಶ್ ಗುಂಡೂರಾವ್ ಜೊತೆ ಸ್ಥಳೀಯ ನಿವಾಗಿಗಳು ಅಕ್ಕ ಪಕ್ಕದ ಗ್ರಾಮಗಳು ಜಲಾವೃತವಾಗಿರುವ ಬಗ್ಗೆ ಚರ್ಚೆ ನಡೆಸಿದರು. ಪ್ರತಿ ವರ್ಷ ಅದ್ಯಪಾಡಿಯಲ್ಲಿ ಪಾಲ್ಗುಣಿ ನದಿಯ ನೆರೆ ಪ್ರವಾಹದ ಬಗ್ಗೆ ಮಾಹಿತಿ ನೀಡಿದರು.

ತೋಟ ಗದ್ದೆಗಳು ಮುಳುಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ  ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.   ಅದ್ಯಪಾಡಿಯ ಅಕ್ಕ ಪಕ್ಕದ ಹಳ್ಳಿಗಳಿಗೆ ಪಲ್ಗುಣಿ ನದಿ ನೆರೆ ಹಾವಳಿ ತಡೆಯಲು,  ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರಿಂದ ವರಿದಿ ಪಡೆದು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಪ್ರವಾಹ ಬಂದಿರುವ ಈ ಸಂದರ್ಭದಲ್ಲಿಯೇ ತಂತ್ರಜ್ಞರನ್ನ ಸ್ಥಳಕ್ಕೆ ಕರೆತಂದು ಸಲಹೆ ಪಡೆಯಿರಿ ಎಂದು ಸಚಿವರು ಸಲಹೆ ನೀಡಿದರು.

ನೆರೆ ಪರಿಹಾರ ಪಡೆಯಲು ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಸಚಿವ ದಿನೇಶ್ ಗುಂಡೂರಾವ್

ಇನ್ನು ನೆರೆ ಹಾವಳಿ ತಡೆಗೆ ಶಾಶ್ವತ ಪರಿಹಾರ ನೀಡುವಂತೆ ಆಗ್ರಹಿಸಿ ಅದ್ಯಪಾಡಿ ಗ್ರಾಮದ ನಿವಾಸಿಗಳು ಪರಿಹಾರವನ್ನ ನಿರಾಕರಿಸಿದರು. ಈ ವೇಳೆ ನೆರೆ ಪರಿಹಾರ ಪಡೆಯಲು ನಿರಾಕರಿಸಿದ ಅದ್ಯಪಾಡಿ ರೈತರನ್ನ ಸಚಿವ ದಿನೇಶ್ ಗುಂಡೂರಾವ್ ಮನವೊಲಿಸಿದರು.

ನೆರೆ ಪರಿಹಾರ ತೆಗೆದುಕೊಳ್ಳುವಂತೆ ನಿವಾಸಿಗರಿಗೆ ಮನವಿ ಮಾಡಿದ ಸಚಿವ ದಿನೇಶ್ ಗುಂಡೂರಾವ್, ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ. ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ.‌. ಒಂದಕ್ಕೂಂದು ಲಿಂಕ್ ಮಾಡುವ ಅಗತ್ಯವಿಲ್ಲ. ಭತ್ತದ ಗದ್ದೆ ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಾ.. ಅದಕ್ಕೆ  ಸರ್ಕಾರದಿಂದ ಸಿಗುವ ನೆರೆ ಪರಿಹಾರವನ್ನ ಪಡೆಯಿರಿ. ಪಲ್ಗಣಿ ನದಿಯಿಂದಾಗುವ ನೆರೆ ಹಾವಳಿ ತಡೆಯುವ ಶಾಶ್ವತ ಪರಿಹಾರ ಒದಗಿಸುವ ಜವಾಬ್ದಾರಿ ನಮಗೆ ಬಿಡಿ ಎಂದು ರೈತರಲ್ಲಿ ಮನವಿ ಮಾಡಿದರು. ಸಚಿವರ ಮನವಿಗೆ ಒಪ್ಪಿಗೆ ಸೂಚಿಸಿ ಪರಿಹಾರ ಪಡೆಯುವುದಾಗಿ ಸ್ಥಳೀಯ ನಿವಾಸಿಗರು ತಿಳಿಸಿದರು.

ಅದ್ಯಪಾಡಿ ನಿವಾಸಿಗರು ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಕಳೆದ 11 ವರ್ಷದಿಂದ ನೆರೆ ಪರಿಹಾರವನ್ನ ತಿರಸ್ಕರಿಸಿದ್ದರು.

Key words: Minister, Dinesh Gundurao, flood, affected areas

Tags :

.