For the best experience, open
https://m.justkannada.in
on your mobile browser.

ಸೆಮಿಕಂಡಕ್ಟರ್ ಉದ್ಯಮ ಸ್ಥಾಪನೆ ಸಂಬಂಧ ಸದ್ಯದಲ್ಲೇ ಎಚ್ ಡಿಕೆ ಭೇಟಿ- ಸಚಿವ ಎಂ‌.ಬಿ ಪಾಟೀಲ್

06:29 PM Jun 18, 2024 IST | prashanth
ಸೆಮಿಕಂಡಕ್ಟರ್ ಉದ್ಯಮ ಸ್ಥಾಪನೆ ಸಂಬಂಧ ಸದ್ಯದಲ್ಲೇ ಎಚ್ ಡಿಕೆ ಭೇಟಿ  ಸಚಿವ ಎಂ‌ ಬಿ ಪಾಟೀಲ್

ಬೆಂಗಳೂರು,ಜೂನ್,18,2024 (www.justkannada.in): ರಾಜ್ಯದವರೇ ಆದ ಎಚ್ ಡಿ ಕುಮಾರಸ್ವಾಮಿ ಅವರು ಈಗ ಕೇಂದ್ರ ಸರ್ಕಾರದಲ್ಲಿ ಭಾರೀ ಕೈಗಾರಿಕಾ ಸಚಿವರಾಗಿದ್ದಾರೆ. ರಾಜ್ಯದಲ್ಲಿ ಸೆಮಿಕಂಡಕ್ಟರ್ ಉದ್ಯಮಕ್ಕೆ ಹೂಡಿಕೆ ಆಕರ್ಷಣೆ ಮತ್ತು ಮುಂದಿನ ಬೆಳವಣಿಗೆ ಕುರಿತು ಚರ್ಚಿಸಲು ಸದ್ಯದಲ್ಲೇ ಅವರನ್ನು ಭೇಟಿ ಮಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ ಪಾಟೀಲ್  ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್ , ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತಿನಲ್ಲಿ ನೆಲೆಯೂರಲಿರುವ ಅಮೆರಿಕದ ಮೈಕ್ರಾನ್ ಸೆಮಿಕಂಡಕ್ಟರ್ ಕಂಪನಿಗೆ ಕೇಂದ್ರ ಸರಕಾರ ಶೇ 50 ಮತ್ತು ಅಲ್ಲಿನ ರಾಜ್ಯ ಸರಕಾರ ಶೇ 20ರಷ್ಟು ಪ್ರೋತ್ಸಾಹಧನ ನೀಡುತ್ತಿವೆ. ನಮಗೂ ಇದೇ ಮಾದರಿಯ ಉತ್ತೇಜನ ಬೇಕಾಗಿದೆ. ಈ ಸಂಬಂಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟ ಮಾಡಿ ಬಂಡವಾಳ ಆಕರ್ಷಣೆ ಕುರಿತು ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಸೆಮಿಕಂಡಕ್ಟರ್ ಕ್ಷೇತ್ರವು ಆಧುನಿಕ ಜಗತ್ತಿನಲ್ಲಿ ಪ್ರಮುಖ ಉದ್ಯಮವಾಗಿದೆ. ಕೇಂದ್ರ ಸರಕಾರವು ಎಲ್ಲ ರಾಜ್ಯಗಳಿಗೂ ಸಮಾನ ಅವಕಾಶ ಮತ್ತು ಪ್ರೋತ್ಸಾಹ ನೀಡಬೇಕಾದ್ದು ಅಪೇಕ್ಷಣೀಯ ಎಂದು ಎಂ.ಬಿ ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

Key words: Minister, MB Patil, HDK, semiconductor, industry

Tags :

.