ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಪುಂಡಾಟ ಮೆರೆದ ಕಿಡಿಗೇಡಿಗಳು.
12:34 PM Jan 01, 2024 IST
|
prashanth
ಬೆಳಗಾವಿ, ಜನವರಿ,1,2024(www.justkannada.in): ಹೊಸ ವರ್ಷದ ಸಂಭ್ರಮದಲ್ಲಿರುವಾಗಲೇ ಇತ್ತ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ.
ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ಈ ಘಟನೆ ನಡೆದಿದೆ. ಇಲ್ಲಿ ಕಟ್ಟಿದ್ದ ನಾಡಧ್ವಜಕ್ಕೆ ರಾತ್ರೋರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಕಿಡಿಗೇಡಿತನವನ್ನ ಪ್ರದರ್ಶಿಸಿದ್ದಾರೆ. ಪುಂಡರ ಈ ಕೃತ್ಯಕ್ಕೆ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರ ಹಾಕಿದ್ದು, ಕೂಡಲೇ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನ ಬಂಧಿಸುವಂತೆ ಆಗ್ರಹಿಸಿದ್ದಾರೆ.
Key words: miscreants - Kannada flag –fire-Belguam
Next Article