HomeBreaking NewsLatest NewsPoliticsSportsCrimeCinema

 IPL ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಮಿಚೆಲ್ ಸ್ಟಾರ್ಕ್ ಸೇಲ್: 24.75 ಕೋಟಿ ರೂ. ಕೊಟ್ಟು ಖರೀದಿಸಿದ ಕೆಕೆಆರ್.

04:22 PM Dec 19, 2023 IST | prashanth

ದುಬೈ,ಡಿಸೆಂಬರ್,19,2023(www.justkannada.in): ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆಟಗಾರರ ಹರಾಜು ಪ್ರಕ್ರಿಯೆ ದುಬೈನಲ್ಲಿ ಇಂದು ನಡೆಯುತ್ತಿದ್ದು ಐಪಿಎಲ್ ಇತಿಹಾಸದಲ್ಲೇ  ಆಸ್ಟ್ರೇಲಿಯಾ ತಂಡದ ಬೌಲರ್ ಮಿಚೆಲ್ ಸ್ಟಾರ್ಕ್ ಅತಿ ಹೆಚ್ಚು ಮೊತ್ತಕ್ಕೆ ಖರೀದಿಯಾಗಿದ್ದಾರೆ.

ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಸ್ಟಾರ್ಕ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಬರೊಬ್ಬರಿ 24.75 ಕೋಟಿ ರೂ.ಗೆ ಖರೀದಿಯಾಗಿದ್ದಾರೆ. ಇದಕ್ಕೂ ಮುನ್ನ ಪ್ಯಾಟ್ ಕಮಿನ್ಸ್ ಅವರನ್ನ ಸನ್ ರೈಸರ್ಸ್ ಹೈದರಾಬಾದ್ 20.50 ಕೋಟಿ ರೂ ಕೊಟ್ಟು ಖರೀದಿಸಿದೆ.  ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ಮೊತ್ತಕ್ಕೆ ಸೇಲ್ ಆದ ಆಟಗಾರ ಎಂಬ ಹೆಗ್ಗಳಿಕೆಗೆ ಪ್ಯಾಟ್ ಕಮಿನ್ಸ್ ಪಾತ್ರರಾಗಿದ್ದರು. ನಂತರ ನಡೆದ  ಹರಾಜು ಪ್ರಕ್ರಿಯೆಯಲ್ಲಿ ಇದೀಗ ಆಸ್ಟ್ರೇಲಿಯಾ ಬೌಲರ್ ಮಿಚೆಲ್ ಸ್ಟಾರ್ಕ್ 24 ಕೋಟಿ ರೂ.ಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ  ದುಬಾರಿ ಮೊತ್ತಕ್ಕೆ ಖರೀದಿಯಾದ ಆಟಗಾರನಾಗಿದ್ದಾರೆ.

ಇನ್ನು ವಿಂಡೀಸ್ ಮಾರಕ ವೇಗಿ ಅಲ್ಜಾರಿ ಜೋಸೆಫ್ (1 ಕೋಟಿ ಮೂಲಬೆಲೆ) ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ ಸೂಪರ್ ಜೇಂಟ್ಸ್, ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಂದೆಬಂತು. ಇವರು ಅಂತಿಮವಾಗಿ 11.50 ಕೋಟಿಗೆ ಆರ್​ಸಿಬಿ ಪಾಲಾದರು.

2 ಕೋಟಿ ಮೂಲಬೆಲೆಯ ಉಮೇಶ್ ಯಾದವ್ ಖರೀದಿಗೆ ಗುಜರಾತ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್ ಮುಂದೆಬಂತು. ಅಂತಿಮವಾಗಿ ಯಾದವ್ 5.80 ಕೋಟಿಗೆ ಗುಜರಾತ್ ಪಾಲಾದರು.

50 ಲಕ್ಷ ಮೂಲಬೆಲೆ ಹೊಂದಿದ್ದ ಶಿವಂ ಮಾವಿ ಖರೀದಿಗೆ ಲಕ್ನೋ ಸೂಪರ್ ಜೇಂಟ್ಸ್ ಮತ್ತು ಆರ್​ಸಿಬಿ ನಡುವೆ ಕಠಿಣ ಪೈಪೋಟಿ ನಡೆಯಿತು. ಅಂತಿಮವಾಗಿ ಇವರು ಅಚ್ಚರಿ ಎಂಬಂತೆ 6.40 ಕೋಟಿಗೆ ಲಕ್ನೋ ಫ್ರಾಂಚೈಸಿ ಪಾಲಾಗಿದ್ದಾರೆ.

ದ. ಆಫ್ರಿಕಾದ ಜೆರಾಲ್ಡ್ ಕೋಟ್ಝಿ (2 ಕೋಟಿ ಮೂಲಬೆಲೆ) ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಂದೆಬಂತು. ಇವರು 5 ಕೋಟಿಗೆ ಮುಂಬೈ ಪಾಲಾಗಿದ್ದಾರೆ.

ಆರ್​ಸಿಬಿ ಮಾಜಿ ಆಟಗಾರ ಹರ್ಷಲ್ ಪಟೇಲ್  ಖರೀದಿಗೆ ಗುಜರಾತ್, ಲಕ್ನೋ ಮತ್ತು ಪಂಜಾಬ್ ಮುಂದೆ ಬಂತು. ಕಠಿಣ ಪೈಪೋಟಿಯ ನಡುವೆ ಇವರು ಅಂತಿಮವಾಗಿ ಬರೋಬ್ಬರಿ 11.75 ಕೋಟಿಗೆ ಪಂಜಾಬ್ ಪಾಲಾಗಿದ್ದಾರೆ.

1 ಕೋಟಿ ಮೂಲಬೆಲೆಯೊಂದಿಗೆ ಕಾಣಿಸಿಕೊಂಡ ನ್ಯೂಝಿಲೆಂಡ್ ಆಲ್ರೌಂಡರ್ ಡೇರಿಲ್ ಮಿಚೆಲ್ ಖರೀದಿಗೆ ಡೆಲ್ಲಿ, ಚೆನ್ನೈ ಮತ್ತು ಪಂಜಾಬ್ ನಡುವೆ ಕಾಳಗ ನಡೆಯಿತು. ಕೊನೆಯಲ್ಲಿ ಇವರು 14 ಕೋಟಿಗೆ ಚೆನ್ನೈ ಪಾಲಾಗಿದ್ದಾರೆ.

ಈ ಬಾರಿಯ ವಿಶ್ವಕಪ್ ನಲ್ಲಿ ಮಿಂಚಿದ್ದ ನ್ಯೂಜಿಲೆಂಡ್ ತಂಡದ ಯುವ ಆಲ್ ರೌಂಡರ್ ರಚಿನ್ ರವೀಂದ್ರ ಕೇವಲ 1 ಕೋಟಿ 80 ಲಕ್ಷ ರೂ. ಗಳಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಾರಾಟವಾಗಿದ್ದಾರೆ.

ಟೀಮ್ ಇಂಡಿಯಾ ಆಲ್ರೌಂಡರ್ ಶಾರ್ದೂಲ್ ಥಾಕೂರ್ (2 ಕೋಟಿ ಮೂಲಬೆಲೆ) ಖರೀದಿಗೆ ಸಿಎಸ್ ​ಕೆ ಮತ್ತು ಹೈದರಾಬಾದ್ ನಡುವೆ ಪೈಪೋಟಿ ಏರ್ಪಟಿತು. ಇವರು 4 ಕೋಟಿಗೆ ಚೆನ್ನೈ ಪಾಲಾಗಿದ್ದಾರೆ.

Key words: Mitchell Starc-sold – highest- amount – IPL- history

Tags :
amounthighesthistoryIPLMitchell Starc-sold
Next Article