ಶಾಸಕ ಹೆಚ್. ಡಿ ರೇವಣ್ಣಗೆ ರಿಲೀಫ್: ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ಕೋರ್ಟ್
06:43 PM May 13, 2024 IST | prashanth
ಬೆಂಗಳೂರು,ಮೇ,13,2024 (www.justkannada.in): ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿಸಚಿವ, ಶಾಸಕ ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು ಜಾಮೀನು ಮಂಜೂರು ಮಾಡಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.
ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಾದ ಪ್ರತಿವಾದ ಆಲಿಸಿ ಆದೇಶವನ್ನ ಕಾಯ್ದಿರಿಸಿತ್ತು. ಇದೀಗ ಹೆಚ್.ಡಿ ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಈ ಮೂಲಕ ಜೈಲುವಾಸ ಅನುಭವಿಸುತ್ತಿದ್ದ ಹೆಚ್ ಡಿ ರೇವಣ್ಣರಿಗೆ ರಿಲೀಫ್ ಸಿಕ್ಕಂತಾಗಿದೆ.
Key words: MLA, HD Revanna, Court, bail