ಶಾಸಕ ಮುನಿರತ್ನಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
12:04 PM Sep 21, 2024 IST | prashanth
ಬೆಂಗಳೂರು,ಸೆಪ್ಟಂಬರ್,21,2024 (www.justkannada.in): ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರನ್ನ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇದೀಗ ಶಾಸಕ ಮುನಿರತ್ನ ಅವರನ್ನ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಗುತ್ತಿಗೆದಾರ ಚಲುವರಾಜುಗೆ ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಜಾಮೀನು ಪಡೆದು ಹೊರಬಂದ ಬೆನ್ನಲ್ಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಪೊಲೀಸರು ಬಂಧಿಸಿದ್ದರು.
Key words: MLA, Munirathna, judicial custody, 14 days