For the best experience, open
https://m.justkannada.in
on your mobile browser.

ವಿಧಾನ ಪರಿಷತ್ ಚುನಾವಣೆ: ಚುನಾವಣಾ ವೀಕ್ಷಕರ ನೇಮಕ.

06:11 PM May 18, 2024 IST | prashanth
ವಿಧಾನ ಪರಿಷತ್ ಚುನಾವಣೆ  ಚುನಾವಣಾ ವೀಕ್ಷಕರ ನೇಮಕ

ಮೈಸೂರು,ಮೇ,18,(www.justkannada.in): ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ  ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆ ಸಂಬoಧ ಭಾರತ ಚುನಾವಣಾ ಆಯೋಗವು ಹಿರಿಯ ಐ.ಎ.ಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನು ನೇಮಕ ಮಾಡಿದೆ.

ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಅನಿಲ್ ಕುಮಾರ್ ಟಿ.ಕೆ (ಐಎಎಸ್) ಹಾಗೂ ಹರ್ಷ ಗುಪ್ತ (ಐಎಎಸ್) ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಿಸಲಾಗಿದ್ದು, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ರುದ್ರೇಶ್.ಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ.ಸುದರ್ಶನ್ ಅವರು ಸಹಾಯಕ ಅಧಿಕಾರಿಗಳಾಗಿರುತ್ತಾರೆ.

ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗೆ ಡಾ.ರವಿಶಂಕರ್ ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಿಸಲಾಗಿದ್ದು, ಮೈಸೂರಿನ ಅಬಕಾರಿ ಉಪ ಆಯುಕ್ತರಾದ ಎಸ್.ನಾಗರಾಜಪ್ಪ ಅವರು ಸಹಾಯಕ ಅಧಿಕಾರಿಗಳಾಗಿರುತ್ತಾರೆ.

ಮೂರು ಕ್ಷೇತ್ರಗಳ ಚುನಾವಣಾ ವೀಕ್ಷಕರು ಈಗಾಗಲೇ ಚುನಾವಣಾ ಕೆಲಸ-ಕಾರ್ಯಗಳ ವೀಕ್ಷಣೆ ನಡೆಸುತ್ತಿದ್ದು, ಸದರಿ ಚುನಾವಣಾ ಚುನಾವಣಾ ವೀಕ್ಷಕರನ್ನು ಭೇಟಿ ಮಾಡಲು ಅಥವಾ ಸಂಪರ್ಕಿಸಲು ದೂ.ಸಂ 7204294565 ಗೆ ಕರೆ ಮಾಡಬಹುದು ಎಂದು ಕರ್ನಾಟಕ ವಿಧಾನ ಪರಿಷತ್ ನ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: MLC, Elections,  observers, Appointment

Tags :

.