ವಿಧಾನಪರಿಷತ್ ಚುನಾವಣೆ: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಮತದಾನ.
ಬೆಂಗಳೂರು, ಜೂನ್, 3,2024 (www.justkannada.in) : ಈಗಾಗಲೇ ಲೋಕಸಭೆ ಚುನಾವಣೆ ಮುಕ್ತಾಯವಾಗಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಇಂದು ವಿಧಾನ ಪರಿಷತ್ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರದ ಮತದಾನ ನಡೆಯುತ್ತಿದೆ.
ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 4ರವರೆಗೆ ಮತದಾನ ನಡೆಯಲಿದೆ. ಕಾಂಗ್ರೆಸ್ 6 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಿದೆ. ಆದರೆ, ಬಿಜೆಪಿ 4, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮೈತ್ರಿಯಾಗಿ ಅಖಾಡಕ್ಕಿಳಿದಿವೆ.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಮರಿತಿಬ್ಬೇಗೌಡ ಹಾಗೂ ಜೆಡಿಎಸ್ ನಿಂದ ವಿವೇಕಾನಂದ ಸ್ಪರ್ಧಿಸಿದರೇ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಡಿಟಿ ಶ್ರೀನಿವಾಸ್ ಹಾಗೂ ಬಿಜೆಪಿಯಿಂದ ವೈಎ ನಾರಾಯಣಸ್ವಾಮಿ ಸ್ಪರ್ಧಿಸಿದ್ದಾರೆ. ಇನ್ನು ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಕೆಕೆ ಮಂಜುನಾಥ್ ಹಾಗೂ ಜೆಡಿಎಸ್ನಿಂದ ಎಸ್‌ಎಲ್ ಭೋಜೇಗೌಡ ಕಣಕ್ಕಿಳಿದಿದ್ದಾರೆ.
ಹಾಗೆಯೇ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಡಾ. ಚಂದ್ರಶೇಖರ ಪಾಟೀಲ ಹಾಗೂ ಬಿಜೆಪಿಯಿಂದ ಅಮರನಾಥ ಪಾಟೀಲ್ ಕಣದಲ್ಲಿದ್ದರೇ ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಆಯನೂರು ಮಂಜುನಾಥ್ ಹಾಗೂ ಬಿಜೆಪಿಯಿಂದ ಧನಂಜಯ ಸರ್ಜಿ ಸ್ಪರ್ಧಿಸಿದ್ದಾರೆ.
ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮೋಜಿಗೌಡ ಹಾಗೂ ಭಾರತೀಯ ಜನತಾ ಪಕ್ಷದಿಂದ ಅ.ದೇವೇಗೌಡ ಕಣದಲ್ಲಿದ್ದಾರೆ.
Key words: MLC Elections, Voting, Graduate, Teacher, Constituencies