For the best experience, open
https://m.justkannada.in
on your mobile browser.

ಹುಣಸೂರು ಪ್ರತ್ಯೇಕ ಜಿಲ್ಲೆಗೆ ಮತ್ತೆ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹ.

12:31 PM Jan 24, 2024 IST | prashanth
ಹುಣಸೂರು ಪ್ರತ್ಯೇಕ ಜಿಲ್ಲೆಗೆ ಮತ್ತೆ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಆಗ್ರಹ

ಮೈಸೂರು,ಜನವರಿ,24,2024(www.justkannada.in):  ಹುಣಸೂರು ಪ್ರತ್ಯೇಕ ಜಿಲ್ಲೆ ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು ಹುಣಸೂರು ತಾಲ್ಲೂಕನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕು ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಎಂಎಲ್ ಸಿ ಹೆಚ್.ವಿಶ್ವನಾಥ್, ದೇವರಾಜ ಅರಸು ಹುಟ್ಟೂರು ಪ್ರತ್ಯೇಕ ಜಿಲ್ಲೆಯಾದ್ರೆ ಸಾಕಷ್ಟು ಅನುಕೂಲಗಳು ಆಗುತ್ತದೆ.ಮೈಸೂರು ಜಿಲ್ಲಾಧಿಕಾರಿಗಳಿಗೆ ಸಾಕಷ್ಟು ಒತ್ತಡ ಇದೆ. ತಾಲೂಕು ಕೇಂದ್ರಗಳಿಗೆ ಹೋಗಲು ಕಷ್ಟವಾಗುತ್ತದೆ. ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. 6 ತಾಲೂಕುಗಳಿಗೆ ನಾಲ್ಕು ಜನ ಶಾಸಕರಿದ್ದೇವೆ‌. ಎಲ್ಲಾ ಶಾಸಕರ ಜೊತೆ ಮಾತನಾಡಿದ್ದೇನೆ. ಸಿಎಂ ಜೊತೆಯೂ ಸಹ ಮಾತನಾಡುತ್ತೇನೆ. ಹುಣಸೂರು, ಪಿರಿಯಾಪಟ್ಟಣ, ಎಚ್.ಡಿ ಕೋಟೆ ರಾಜ್ಯದಲ್ಲೇ ಸಂಪತ್ಭರಿತ ತಾಲ್ಲೂಕು. ನೂರಾರು ಕೋಟಿ ತಂಬಾಕಿನಿಂದ ಆದಾಯ ಬರುವ ತಾಲ್ಲೂಕುಗಳಿವೆ. ಆರು ತಾಲೂಕುಗಳನ್ನ ಸೇರಿಸಿ ಒಂದು ಜಿಲ್ಲೆಯಾಗಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನಮ್ಮ ಜಿಲ್ಲೆಯವರೇ ಸಿಎಂ ಆಗಿದ್ದಾರೆ. ಹೀಗಾಗಿ ದೇವರಾಜ ಅರಸು ಅವರ ಹೆಸರು ಅಮರವಾಗಬೇಕು, ಹುಣಸೂರು ತಾಲೂಕು ಪ್ರತ್ಯೇಕ ಜಿಲ್ಲೆಯಾಗಬೇಕು. ಎಚ್‌.ಡಿ ಕೋಟೆ, ಪಿರಿಯಾಪಟ್ಟಣ ಹಾಗೂ ಹುಣಸೂರಿನಲ್ಲಿ ಅತಿ ಹೆಚ್ಚು ಬುಡಕಟ್ಟು ಜನಾಂಗದವರು ಇದ್ದಾರೆ. ಅವರ ಕಷ್ಟಗಳಿಗೆ  ಜಿಲ್ಲಾಧಿಕಾರಿಗಳು ಸ್ಪಂದಿಸುತ್ತಿಲ್ಲ. ನಾನು‌ ಈ‌ ವಿಚಾರದಲ್ಲಿ ಹೋರಾಟ, ಸಂಘರ್ಷ ಮಾಡುವುದಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುತ್ತೇನೆ ಎಂದು ಹೆಚ್.ವಿಶ್ವನಾಥ್ ಹೇಳಿದರು.

ರಾಮನನ್ನ ಲೋಕಸಭಾ ಚುನಾವಣೆ ಚೀಪ್  ಕ್ಯಾಂಪೇನರ್ ಮಾಡಿಕೊಂಡಿದ್ದಾರೆ.

ಇದೇ ವೇಳೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವಿಚಾರ ಕುರಿತು ಪ್ರತಿಕ್ರಿಯಿಸಿ ಬಿಜೆಪಿ ವಿರುದ್ಧ ಹೊಗಳಿದ ಹಾಗೆ ತೆಗಳಿದ ಹೆಚ್. ವಿಶ್ವನಾಥ್,  ಬಿಜೆಪಿಯವರು ರಾಮನನ್ನ ಲೋಕಸಭಾ ಚುನಾವಣೆ ಚೀಪ್  ಕ್ಯಾಂಪೇನರ್ ಮಾಡಿಕೊಂಡಿದ್ದಾರೆ. ಇದು ಸರಿಯಲ್ಲ ರಾಮ ಎಲ್ಲರ ಆಸ್ತಿ. ರಾಮಮಂದಿರ ಉದ್ಟಾಟನೆಯಾಗಿದೆ. ಜನರು ಬಹಳ ಸಂತೋಷವಾಗಿದ್ದಾರೆ. ರಾಮ ಭಾರತೀಯರ ಆರಾಧ್ಯದೈವ, ಭಾರತೀಯತ ಅಸ್ಮೀತೆ. ನೀವು ಕೆಲಸ ಮಾಡಿದ್ದೀರಾ ಶಭಾಷ್. ಮೋದಿ 500 ವರ್ಷಗಳ ಸಮಸ್ಯೆಯನ್ನ ಬಗೆಹರಿಸಿದ್ದಾರೆ. ಜನರ ಕಷ್ಟಗಳಿಗೆ ಮೋದಿ ಇವಾಗಲಾದರೂ ಸ್ಪಂದಿಸಬೇಕು. ಚುನಾವಣೆಗೂ ಮುನ್ನ ಪ್ರತಿಯೊಬ್ಬರಿಗೆ 15 ಲಕ್ಷ ಕೊಡುತ್ತೇನೆ ಅಂದಿದ್ರಿ. ಆದಷ್ಟು ಬೇಗ ಹಣವನ್ನ ಹಾಕಿ. ಜನರು ಸಾಕಷ್ಟು ಕಷ್ಟದಲ್ಲಿದ್ದು ಎಲ್ಲಾ ವಸ್ತುಗಳಿಗೆ ಜಿಎಸ್ ಟಿ ಕಟ್ಟುತ್ತಿದ್ದಾರೆ. ಅತಿ ಹೆಚ್ಚು ಜಿಎಸ್ ಟಿ ಕಟ್ಟುತ್ತಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ನೀರವ್ ಮೋದಿ ಅವರಿಂದ ದೇಶಕ್ಕೆ ಲಕ್ಷಾಂತರ ಕೋಟಿ ನಷ್ಟವಾಗಿದೆ. ಅವರನ್ನ ಬಂಧಿಸಿ ಕರೆತರುತ್ತೇನೆ ಅಂದಿದ್ದರು ಅದು ಸಹ ಸಾಧ್ಯವಾಗಿಲ್ಲ ಎಂದು ಕುಟುಕಿದರು.

Key words: MLC-H. Vishwanath - again -separate district - Hunsur.

Tags :

.