For the best experience, open
https://m.justkannada.in
on your mobile browser.

ನಾಳೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ:  ಭಾರಿ ಬಿಗಿ ಭದ್ರತೆ

10:28 AM Jun 08, 2024 IST | prashanth
ನಾಳೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ   ಭಾರಿ ಬಿಗಿ ಭದ್ರತೆ

ನವದೆಹಲಿ,ಜೂನ್,8,2024 (www.justkannada.in): ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಪಡೆದಿದ್ದು ಇದೀಗ ಅಧಿಕಾರಕ್ಕೇರಲು ಸಜ್ಜಾಗಿದೆ. ನಾಳೆ ನರೇಂದ್ರ ಮೋದಿಯವರು 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ನಿನ್ನೆ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಭೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಿದ್ದರು. ಈ ಬೆನ್ನಲ್ಲೇ ಮೋದಿ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಜೂನ್ 9 ಅಂದರೆ ನಾಳೆ ಸಂಜೆ 7.15ಕ್ಕೆ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನಾಳೆ  ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ರಾಷ್ಟ್ರಪತಿ ಭವನದಲ್ಲಿ ಭಾರಿ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ದೆಹಲಿಯಲ್ಲಿ ಡ್ರೋಣ್ ಹಾರಾಟ ನಿಷೇಧ ಮಾಡಲಾಗಿದೆ.  ಕಾರ್ಯಕ್ರಮಕ್ಕೆ ಬರುವ ವಿದೇಶಿ ಗಣ್ಯರಿಗೆ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ ಬೂತಾನ್ ಮಾರಿಷಸ್ ಸೇರಿ ಹಲವು ದೇಶಗಳ ನಾಯಕರು ಪಾಲ್ಗೊಳ್ಳಲಿದ್ದಾರೆ.  ಗಣ್ಯರ ವಾಸ್ತವ್ಯಕ್ಕಾಗಿ ಹೋಟೆಲ್ ಗಳನ್ನ ಬುಕ್  ಮಾಡಲಾಗಿದ್ದು, ಹೋಟೆಲ್  ಅವರಣದ ಒಳಗೆ ಹೊರಗೆ ಮೂರು ಹಂತದಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

Key words: Modi-oath –PM-tomorrow-security

Tags :

.