For the best experience, open
https://m.justkannada.in
on your mobile browser.

ಮೋಟಾರ್ ರೀವೈಂಡಿಂಗ್ ಮತ್ತು ರಿಪೇರಿ ತರಬೇತಿ

06:03 PM Jun 29, 2024 IST | mahesh
ಮೋಟಾರ್ ರೀವೈಂಡಿಂಗ್ ಮತ್ತು ರಿಪೇರಿ ತರಬೇತಿ

ಬೆಂಗಳೂರು, ಜೂನ್29 :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಮೋಟಾರ್ ರೀವೈಂಡಿಂಗ್ ಉಚಿತ ತರಬೇತಿ   ಜುಲೈ 10  ರಿಂದ ಆಯೋಜಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ 18 ರಿಂದ 45 ರ್ಷನ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು 08 ಜುಲೈ ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 8884554510, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

key words: Motor rewinding, repair training

Tags :

.