HomeBreaking NewsLatest NewsPoliticsSportsCrimeCinema

ಮೈಸೂರು- ಕೊಡಗು ಕ್ಷೇತ್ರದಲ್ಲಿ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಸಂಸದ ಪ್ರತಾಪ್ ಸಿಂಹ ರಿಯಾಕ್ಷನ್ ಹೀಗಿತ್ತು.

01:27 PM Jan 13, 2024 IST | prashanth

ಮೈಸೂರು,ಜನವರಿ,13,2024(www.justkannada.in):  ಮೈಸೂರು ಕೊಡಗು ಕ್ಷೇತ್ರದಿಂದ ಡಾ ಯತೀಂದ್ರ  ಸಿದ್ದರಾಮಯ್ಯ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ಡಾ. ಯತೀಂದ್ರ ಸಿದ್ದರಾಮಯ್ಯ ತಮ್ಮ ಎದುರಾಳಿಯಾದರೆ ಒಳ್ಳೆಯದು ಎಂದಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಂಸದ ಪ್ರತಾಪ್ ಸಿಂಹ,  ನಾನು ಯಾವತ್ತೂ ನನ್ನ ಎದುರಾಳಿಯನ್ನು ನೋಡಲ್ಲ. ಮೋದಿ ಅವರ ಹೆಸರಿನ  ಮುಂದೆ ಯಾವ ಎದುರಾಳಿ ಹೆಸರು ನಡೆಯಲ್ಲ ಎಂದರು.

ಮೈಸೂರು- ಕೊಡಗು ಕ್ಷೇತ್ರ ಜೆಡಿಎಸ್ ಪಾಲಾಗಲಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಕಾಂಗ್ರೆಸ್ ಗೆ ನಮ್ಮ ಚಿಂತೆ ಯಾಕೆ ? ಕಾಂಗ್ರೆಸ್ ಗೆ ಊರ ಉಸಾಬರಿ ಯಾಕೆ ? ತಮ್ಮ ಅಭ್ಯರ್ಥಿ ಯಾರು ಎಂಬುದನ್ನು ನೋಡಿಕೊಳ್ಳಲಿ. ಕಾಂಗ್ರೆಸ್ ಪಕ್ಷಕ್ಕೆ ಲೋಕಸಭೆಗೆ ಅಭ್ಯರ್ಥಿಗಳೇ ಇಲ್ಲ. ಅಭ್ಯರ್ಥಿಗಳು ಇಲ್ಲದೆ ಮಂತ್ರಿಗಳನ್ನು ನಿಲ್ಲಿಸುವ ದೈನಾಸಿ ಸ್ಥಿತಿ ಕಾಂಗ್ರೆಸ್ ಗೆ ಬಂದಿದೆ. ಬಿಜೆಪಿ-ಜೆಡಿಎಸ್ ನಡುವೆ ಗೊಂದಲ ಇಲ್ಲ. ಈ ಕ್ಷೇತ್ರದಲ್ಲಿ ನನ್ನ ಪರ ಎರಡು ಪಕ್ಷದ ನಾಯಕರ ಆಶೀರ್ವಾದವಿದೆ. ಡಾ. ಯತೀಂದ್ರ ಸಿದ್ದರಾಮಯ್ಯ ತಮ್ಮ ಎದುರಾಳಿಯಾದರೆ ಒಳ್ಳೆಯದು. ಡಾ. ಯತೀಂದ್ರ ಸಿದ್ದರಾಮಯ್ಯ ಸನ್ ಆಫ್  ಸಿದ್ದರಾಮಯ್ಯ ವರ್ಸಸ್ ಪತ್ರಕರ್ತ ಪ್ರತಾಪ್ ಸಿಂಹ ನಡುವೆ ಫೈಟ್ ನಡೆಯುತ್ತೆ ಎಂದು ತಿಳಿಸಿದರು.

ಪಾಪ ತೊಳೆದುಕೊಳ್ಳಲು ಸಿದ್ದರಾಮಯ್ಯ ತಮ್ಮ ಶಿಷ್ಯರ ಜೊತೆ ಅಯೋಧ್ಯೆಗೆ ಹೋಗಿ ಬರಲಿ

ಜನವರಿ 22ರ ಬಳಿಕ ಅಯೋಧ್ಯೆಗೆ ಹೋಗಿಬರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, ರಾಮ ಜನ್ಮಭೂಮಿಗಾಗಿ ರಥಯಾತ್ರೆ ಮಾಡಿದವರು ಅಡ್ವಾಣಿ. ಕೋರ್ಟ್ ಹೋರಾಟ ಮಾಡಿದವರು ರವಿಶಂಕರ್ ಪ್ರಸಾದ್. ನಂತರ ದೇಶಾದ್ಯಂತ ಈ ಬಗ್ಗೆ ಅಭಿಪ್ರಾಯ ಮೂಡಿಸಿದವರು ಮೋದಿ. ಅಡ್ವಾಣಿಯಿಂದ ಮೋದಿವರೆಗೆ ರಾಮಜನ್ಮ ಭೂಮಿ ವಿಚಾರದಲ್ಲಿ ಬಿಜೆಪಿ ಪಾತ್ರ ದೊಡ್ಡದಿದೆ. ರಾಮ ಜನ್ಮ ಭೂಮಿ ವಿಚಾರದಲ್ಲಿ ಕಾಂಗ್ರೆಸ್ ದು ಯಾವ ಪಾತ್ರವೂ ಇಲ್ಲ. ಹೀಗಾಗಿ ಅವರಿಗೆ ಅಪರಾಧಿ ಪ್ರಜ್ಞೆ ಇದೆ. ಅಪರಾಧಿ ಪ್ರಜ್ಞೆ ಕಾರಣ ಅವರು ಉದ್ಘಾಟನೆಯಿಂದ ಹಿಂದೆ ಸರಿದಿದ್ದಾರೆ ಎಂದು ಕಿಡಿಕಾರಿದರು.

ರಾಮನ ಅಸ್ತಿತ್ವವನ್ನೇ  ಪ್ರಶ್ನೆ ಮಾಡಿದ ಕಾಂಗ್ರೆಸ್,  ಪಾಪ ತೊಳೆದುಕೊಳ್ಳಲು ಸಿದ್ದರಾಮಯ್ಯ ಅವರು ತಮ್ಮ ಶಿಷ್ಯರ ಜೊತೆ ಅಯೋಧ್ಯೆಗೆ ಹೋಗಿ ಬರಲಿ ಎಂದು ವಾಗ್ದಾಳಿ ನಡೆಸಿದರು.

Key words: MP Pratap Simha- Yatindra Siddaramaiah- contest - Mysore-Kodagu- constituency.

Tags :
constituencycontest.MP Pratap Simha- Yatindra Siddaramaiahmysore-kodagu
Next Article