HomeBreaking NewsLatest NewsPoliticsSportsCrimeCinema

ಸಂವಿಧಾನದ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಸಂಸದ ರಾಹುಲ್ ಗಾಂಧಿ

05:40 PM Jun 25, 2024 IST | prashanth

ನವದೆಹಲಿ,ಜೂನ್,25,2024 (www.justkannada.in):  18ನೇ ಲೋಕಸಭೆ ಮೊದಲ ಅಧಿವೇಶನ ನಡೆಯುತ್ತಿದ್ದು ನೂತನ ಸಂಸದರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಈ ಮಧ್ಯೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಸಂವಿಧಾನದ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕಾರ ಮಾಡಿದರು.  ಸಂವಿಧಾನದ ಪ್ರತಿ ಎತ್ತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ ರಾಹುಲ್ ಗಾಂಧಿ, 'ಜೈ ಹಿಂದ್, ಜೈ ಸಂವಿಧಾನ' ಎಂದು ಹೇಳಿದರು.

ಈ ವೇಳೆ ವಿಪಕ್ಷಗಳ ಸಂಸದರು ರಾಹುಲ್ ಗಾಂಧಿ ಪರ ಘೋಷಣೆ ಕೂಗಿದರು. ರಾಯ್ ಬರೇಲಿ ಮತ್ತು ವಯನಾಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ರಾಹುಲ್ ಗಾಂಧಿ ಅವರು ರಾಯ್ ಬರೇಲಿ ಕ್ಷೇತ್ರವನ್ನ ಉಳಿಸಿಕೊಂಡು ವಯನಾಡು ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Key words: MP- Rahul Gandhi -oath - Constitution -copy

Tags :
ConstitutioncopyMPoathRahul Gandhi
Next Article