ಪ್ರಧಾನಿ ಮೋದಿ ಭೇಟಿಯಾಗಿ ಚರ್ಚಿಸಿದ ಸಂಸದೆ ಸುಮಲತಾ ಅಂಬರೀಶ್.
04:03 PM Feb 09, 2024 IST
|
prashanth
ನವದೆಹಲಿ,ಫೆಬ್ರವರಿ,9,2024(www.justkannada.in): ಲೋಕಸಭೆ ಚುನಾವಣೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಈ ನಡುವೆ ಮಂಡ್ಯ ಟಿಕೆಟ್ ನಿರೀಕ್ಷೆಯಲ್ಲಿರುವ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು ಮಂಡ್ಯ ಕ್ಷೇತ್ರವನ್ನ ಜೆಡಿಎಸ್ ಉಳಿಸಿಕೊಳ್ಳಲು ಪ್ಲಾನ್ ರೂಪಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರನ್ನ ಸಂಸದೆ ಸುಮಲತಾ ಅಂಬರೀಶ್ ಭೇಟಿಯಾಗುತ್ತಿದ್ದಾರೆ.
ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಟಿಕೆಟ್ ಗಾಗಿ ಮನವಿ ಮಾಡಿದ್ದರು. ಈಗ ಮತ್ತೊಂದೆಜ್ಜೆ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ.
Key words: MP- Sumalata Ambarish -met - discussed -with –PM Modi.
Next Article