ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಅನುಮತಿ: ದೂರುದಾರರಿಗೆ ರಾಜಭವನದಿಂದ ಬುಲಾವ್
ಬೆಂಗಳೂರು,ಆಗಸ್ಟ್,17,2024 (www.justkannada.in): ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಇದೀಗ ಮತ್ತಷ್ಟು ಸಂಕಷ್ಟ ಶುರುವಾಗಿದ್ದು ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.
ಈ ಸಂಬಂಧ ರಾಜಭವನಕ್ಕೆ ಬರುವಂತೆ ದೂರುದಾರರಾದ ಟಿ.ಜೆ ಅಬ್ರಾಹಂ ಮತ್ತು ಸ್ನೇಹಮಯಿ ಕೃಷ್ಣ ಅವರಿಗೆ ಬುಲಾವ್ ನೀಡಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ದೂರುಆರ ಟಿಜೆ ಅಬ್ರಾಹಂ, ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವುದು ಒಳ್ಳೆಯದು. ರಾಜಭವನ ಕಚೇರಿಯಿಂದ ನನಗೆ ದೂರವಾಣಿ ಕರೆ ಬಂದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದೇನೆ. ಹೀಗಾಗಿ ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ಹಾಜರಾಗುತ್ತೇನೆ. ಯಾವುದೇ ದಾಖಲೆಗಳನ್ನ ತೆಗೆದುಕಂಡು ಬರುವುದಕ್ಕೆ ಹೇಳಿಲ್ಲ ಎಂದರು.
ಇನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ನಿರ್ಧಾರವನ್ನ ಖಂಡಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.
Key words: muda case, Governor, permission, prosecution, CM