For the best experience, open
https://m.justkannada.in
on your mobile browser.

ಮುಡಾ ಹಗರಣ: ಸಿಎಂ ವಿರುದ್ದದ ಖಾಸಗಿ ದೂರು: ವಿಚಾರಣೆ ಮುಂದೂಡಿದ ಕೋರ್ಟ್

06:30 PM Aug 09, 2024 IST | prashanth
ಮುಡಾ ಹಗರಣ  ಸಿಎಂ ವಿರುದ್ದದ ಖಾಸಗಿ ದೂರು  ವಿಚಾರಣೆ ಮುಂದೂಡಿದ ಕೋರ್ಟ್

ಬೆಂಗಳೂರು, ಆಗಸ್ಟ್​, 9, 2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದಸ್ನೇಹಮಯಿ ಕೃಷ್ಣ ಎಂಬುವರು ಸಲ್ಲಿಸಿದ್ದ ಖಾಸಗಿ ದೂರು ಕುರಿತು ವಿಚಾರಣೆಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆಗಸ್ಟ್ 13ಕ್ಕೆ ಮುಂದೂಡಿಕೆ ಮಾಡಿದೆ.

ಮುಡಾ ಹಗರಣ  ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ಸ್ನೇಹಮಯಿ ಕೃಷ್ಣ ಎಂಬುವವರ  ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ನಡೆಯಿತು. ದೂರುದಾರರ ಪರ ವಾದ ಮಂಡಿಸಿದ  ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್, ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಆಗಿದ್ದಾಗ ಡಿ ನೋಟಿಫಿಕೇಷನ್ ಮಾಡಲಾಗಿದೆ.

ಮಾಲೀಕರೇ ಅಲ್ಲದ ವ್ಯಕ್ತಿ ಪರವಾಗಿ ಡಿನೋಟಿಫಿಕೇಶನ್ ಮಾಡಿದ್ದಾರೆ . ಈ ಜಮೀನಿನಲ್ಲಿ ದೇವನೂರು ಬಡಾವಣೆ ರಚನೆಯಾಗಿದೆ. ಸಿಎಂ ಪತ್ನಿಯ ಸಹೋದರ ಜಮೀನನ್ನು ಖರೀದಿಸಿದ್ದಾರೆ. 2004ರಲ್ಲಿ ದೇವರಾಜು ನಿಂದ ಜಮೀನನ್ನು ಖರೀದಿಸಲಾಗಿದೆ. ಆಗಲು ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದರು. 2006 ರಿಂದ 2010ರ ನಡುವೆ ಈ ಜಮೀನಿನಲ್ಲಿ ಬಡಾವಣೆ ರಚನೆಯಾಗಿತ್ತು. ಬಡಾವಣೆ ರಚನೆಯಾಗಿ ಸೈಟ್ ಗಳನ್ನು ಹಂಚಲಾಗಿತ್ತು.

ಈ ನಡುವೆ 2010 ರಲ್ಲಿ  ಸಿಎಂ ಪತ್ನಿ ಸಹೋದರನಿಂದ‌ ದಾನಪತ್ರ ಪಡೆದರು. ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವವರೆಗೂ ಸುಮ್ಮನಿದ್ದರು. 2014 ರಲ್ಲಿ ಮುಖ್ಯಮಂತ್ರಿ ಆದಾಗ ಪರಿಹಾರದ ನಿವೇಶನ ಕೇಳಿದರು. ಮಾರಾಟ ಮಾಡಿದ ದೇವರಾಜು ಜಮೀನು ಮಾಲೀಕರಲ್ಲ. ಅವರಿಂದ ಖರೀದಿಸಿದ ಮಲ್ಲಿಕಾರ್ಜುನ ಸ್ವಾಮಿ ಮಾಲೀಕರಾಗುವುದಿಲ್ಲ. ಹೀಗಾಗಿ ಮುಖ್ಯಮಂತ್ರಿ ಪತ್ನಿ ಪಾರ್ವತಿ ಬಿ.ಎಂ ಕೂಡಾ ಮಾಲೀಕರಾಗುವುದಿಲ್ಲ, ಆದರೂ ಜಮೀನಿಗೆ ಬದಲಿ ನಿವೇಶನ‌ ಕೇಳುತ್ತಾರೆ ಎಂದು ದೂರುದಾರರ ಪರ ಹಿರಿಯ ವಕೀಲೆ ಲಕ್ಷ್ಮೀ ಐಯ್ಯಂಗಾರ್ ವಾದ ಮಂಡಿಸಿದರು. ವಿಚಾರಣೆಯನ್ನ ಕೋರ್ಟ್ ಆಗಸ್ಟ್ 13ಕ್ಕೆ ಮುಂದೂಡಿಕೆ ಮಾಡಿದೆ.

Key words: Muda scam, against CM, Court, adjourned, hearing

Tags :

.