HomeBreaking NewsLatest NewsPoliticsSportsCrimeCinema

ಮುಡಾ ಹಗರಣಕ್ಕೆ ಖಂಡನೆ: ಬಿಜೆಪಿ-ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆಗೆ ಚಾಲನೆ

11:35 AM Aug 03, 2024 IST | prashanth

ಬೆಂಗಳೂರು,ಆಗಸ್ಟ್ 2,2024 (www.justkannada.in):  ಮುಡಾ ಹಗರಣ ಖಂಡಿಸಿ ಬಿಜೆಪಿ ಜೆಡಿಎಸ್ ಕೈಗೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು.

ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಹಾಗೂ ಜೆಡಿಎಸ್  ಪಾದಯಾತ್ರೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಕೆಂಗೇರಿಯ ಕೆಂಪಮ್ಮ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪಾದಯಾತ್ರೆಗೆ  ದೀಪ ಬೆಳಗುವ ಮೂಲಕ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಡಿವಿ ಸದಾನಂದ ಗೌಡ, ಸಂಸದರಾದ ಬಸವರಾಜ ಬೊಮ್ಮಾಯಿ, ಯದುವೀರ್ ಒಡೆಯರ್,  ಎಂಎಲ್ಸಿ ಎಸ್ ಆರ್ ವಿಶ್ವನಾಥ್ ಸರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Key words: Muda scam, BJP-JDS,  Mysore Chalo, Padayatra

Tags :
BJP-JDSMuda scamMysore Chalopadayatra
Next Article