HomeBreaking NewsLatest NewsPoliticsSportsCrimeCinema

ಮುಡಾ ಹಗರಣ: ರಾಜ್ಯಪಾಲರ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ಸಂಪುಟ ಸಭೆಯಲ್ಲಿ ನಿರ್ಣಯ

04:14 PM Aug 01, 2024 IST | prashanth

ಬೆಂಗಳೂರು, ಆಗಸ್ಟ್,, 1, 2024 (www.justkannada.in): ಮುಡಾ ಹಗರಣ ಸಂಬಂದ ಸಿಎಂ ಸಿದ್ದರಾಮಯ್ಯಗೆ  ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಎದುರಿಸಬೇಕಿದ್ದ ಹಿನ್ನೆಲೆಯಲ್ಲಿ ಅವರನ್ನು ಹೊರಗಿಟ್ಟು ಸಚಿವ ಸಂಪುಟ ಸಭೆ ನಡೆಸಲಾಯಿತು.  ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎರಡು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್​ ಹಿಂಪಡೆಯುವಂತೆ ಒತ್ತಾಯಿಸುವುದು.  ಹಾಗೆಯೇ  ಈ ಬಗ್ಗೆ ಕಾನೂನು ಹೋರಾಟ ನಡೆಸುವುದಕ್ಕೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮುಡಾದಲ್ಲಿ  ನಡೆದ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿದೆ ಎಂದು ದೂರು ನೀಡಿದ ಬೆನ್ನಲ್ಲೆ ರಾಜ್ಯಪಾಲರು ನೊಟೀಸ್ ಜಾರಿ ಮಾಡಿದ್ದರು. ರಾಜ್ಯಪಾಲರ ನೋಟಿಸ್ ​ಗೆ ಸಚಿವ ಸಂಪುಟ ವಿರೋಧಿಸಿದ್ದು, ನೋಟಿಸ್ ​​​ನಲ್ಲಿ ಬಳಸಿದ ಪದ ಮತ್ತು ಒಕ್ಕಣಿಕೆಗೆ ಆಕ್ಷೇಪಿಸಿದೆ. ಅಲ್ಲದೇ ನೋಟಿಸ್​ ಹಿಂಪಡೆಯುವಂತೆ ನಿರ್ಣಯ ಕೈಗೊಂಡಿದೆ. ಇನ್ನು ಈ ಬಗ್ಗೆ ಹೋರಾಟ ನಡೆಸಲು ಸಹ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

Key words: Muda scam, Cabinet meeting,  Governor notice

 

Tags :
Cabinet meeting.Governor's noticeMuda scamwithdrawal
Next Article