HomeBreaking NewsLatest NewsPoliticsSportsCrimeCinema

ಮುಡಾ ಹಗರಣ: ಸಿಎಂ ಬಚಾವ್ ಆಗಲು ನ್ಯಾಯಾಂಗ ತನಿಖೆ- ಆರ್.ಅಶೋಕ್ ಟೀಕೆ

03:23 PM Jul 15, 2024 IST | prashanth

ಬೆಂಗಳೂರು, ಜುಲೈ.15,2024 (www.justkannada.in): ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಬಚಾವ್ ಆಗಲು ನಿವೃತ್ತ ಜಡ್ಜ್ ಮೂಲಕ ನ್ಯಾಯಾಂಗ ತನಿಖೆ ಮಾಡಿಸುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಸಿಎಂ ಬಚಾವ್ ಆಗುವುದಕ್ಕೆ ನಿವೃತ್ತ ಜಡ್ಜ್ ಮೂಲಕ ನ್ಯಾಯಾಂಗ ತನಿಖೆ ಮಾಡಿಸುತ್ತಿದ್ದಾರೆ. ಸಿಎಂ ಬಚಾವ್ ಆಗೋಕೆ ನಿವೃತ್ತ ಜಡ್ಜ್ ಮುಖಾಂತರ ಇವರ ಮೇಲೆ ಆರೋಪ ಬಂದ್ರೆ ನ್ಯಾಯಂಗ ತನಿಖೆ ಆಗಬೇಕು. ಮುಡಾ ಕೇಸ್​​ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಕಾಂಗ್ರೆಸ್ ವಿರುದ್ಧ ನಾವು ಪ್ರತಿಭಟನೆ ಮಾಡ್ತಿದ್ದೇವೆ. ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. ಸಿಎಂಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೋಡಬೇಕು. ಇಲ್ಲಿದ್ದರೇ ನಾವು ಸದನದ ಒಳಗೂ ಹೋರಾಟ ‌ಮಾಡುತ್ತೇವೆ ಎಂದು ಎಚ್ಚರಿಸಿದರು.

ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ ಸಂಬಂಧ ಪ್ರತಿಕ್ರಿಯಿಸಿದ ಆರ್.ಅಶೋಕ್, ರಾಜ್ಯದ ಇತಿಹಾಸದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ 187 ಕೋಟಿ ಹಣ ಲೂಟಿ ಮಾಡಲಾಗಿದೆ. ಯಾವುದೇ ಸರ್ಕಾರ ಮಾಡಿರಲಿಲ್ಲ. ದಲಿತರ ಪರ ಇದ್ದೇವೆ ಅಂತಾ ಹೇಳಿ ಅವರ ಹಣ ಕಾಂಗ್ರೆಸ್ ಲೂಟಿ‌ ಮಾಡಿದೆ ಎಂದು ಕಿಡಿಕಾರಿದರು.

Key words: Muda Scam, CM, Siddaramaiah, R.Ashok

Tags :
CMMuda scamR.ashokSiddaramaiah
Next Article