For the best experience, open
https://m.justkannada.in
on your mobile browser.

ಮುರುಘಾಶ್ರೀ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್: ನ್ಯಾಯಾಂಗ ಬಂಧನ ವಿಧಿಸಿ ಆದೇಶ.

03:57 PM Apr 23, 2024 IST | prashanth
ಮುರುಘಾಶ್ರೀ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್  ನ್ಯಾಯಾಂಗ ಬಂಧನ ವಿಧಿಸಿ ಆದೇಶ

ಚಿತ್ರದುರ್ಗ, ಏಪ್ರಿಲ್, 23,2024 (www.justkannada.in): ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ಫೋಕ್ಸೋ  ಪ್ರಕರಣ ಸಂಬಂಧ  ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಸ್ವಾಮೀಜಿ  ಅವರ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ.

ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿರುವ ಸುಪ್ರೀಂಕೋರ್ಟ್  ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ  ಮುರುಘಾಶ್ರೀಗೆ ಸೂಚನೆ ನೀಡಿದೆ. ಜೊತೆಗೆ ವಿಶೇಷ ಕೋರ್ಟ್​ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು ಎಂದು ತಿಳಿಸಿದೆ.

ಎಸ್​ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವನ್ನ  ಮುರುಘಾ ಮಠದ ಡಾ. ಶ್ರೀ ಶಿವಮೂರ್ತಿ ಸ್ವಾಮೀಜಿ ಹೊತ್ತಿದ್ದು, ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗೆಯೇ ಜಾಮೀನಿನ ಮೇಲೆ ಹೊರ ಬಂದ ಅವರು, ಮುರುಘಾ ಶ್ರೀ ಮಠ ಹಾಗೂ ಎಸ್​ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು.

ಬಳಿಕ ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುರುಘಾ ಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿತ್ತು. ಅಲ್ಲದೆ, ಮುರುಘಾಮಠ ಹಾಗೂ ಎಸ್​ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.

Key words: Murughashree, bail, Supreme Court

Tags :

.