ನನ್ನ ಜೀವನ ತೆರೆದ ಪುಸ್ತಕ. ಯಾರೂ ಏನು ಮಾಡಲು ಆಗುವುದಿಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.
ರಾಮನಗರ,ನವೆಂಬರ್,21,2023(www.justkannada.in): ಕಾಂಗ್ರೆಸ್ ಕಾರ್ಯಕರ್ತರು ತಮ್ಮ ವಿರುದ್ದ ಪೋಸ್ಟರ್ ಅಂಟಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನನ್ನ ಜೀವನ ತೆರೆದ ಪುಸ್ತಕ. ಯಾರೂ ಏನು ಮಾಡಲು ಆಗುವುದಿಲ್ಲ ಎಂದಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಹೀರಾತು ನೀಡಿ ಓಡಾಡುತ್ತಿದ್ದಾರೆ. ಶಕ್ತಿ ಯೋಜನೆ ಜಾರಿ ಮಾಡಿದ್ದಾರೆ. ಆದರೆ ಸೂಕ್ತ ಬಸ್ ವ್ಯವಸ್ಥೆ ಇಲ್ಲ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಸರ್ಕಾರ ಒಂದು ಕಡೆ ಪ್ರಚಾರ ಮಾಡುತ್ತಿದ್ದಾರೆ. ಮತ್ತೊಂದು ಕಡೆ ನನ್ನ ಪೋಟೊಗಳನ್ನ ಹಾಕಿದ್ದಾರೆ. ನನ್ನ ಜೀವನ ತೆರೆದ ಪುಸ್ತಕ ಯಾರು ಏನು ಮಾಡಲು ಆಗುವುದಿಲ್ಲ ಎಂದರು.
ಬರದ ವಿಚಾರವಾಗಿ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ರೈತರಿಗೆ ಯಾವುದೇ ಪರಿಹಾರ ಹಣವನ್ನು ಇನ್ನೂ ನೀಡಿಲ್ಲ. ರಾಜ್ಯದಲ್ಲಿ ಈ ವರ್ಷದಲ್ಲಿ 33,700 ಕೋಟಿ ರೂ. ಬೆಳೆ ನಷ್ಟವಾಗಿದೆ ಎಂದು ಹೆಚ್.ಡಿಕೆ ತಿಳಿಸಿದರು.
Key words: My life - open book - Former CM -HD Kumaraswamy.