For the best experience, open
https://m.justkannada.in
on your mobile browser.

ಬಿಜೆಪಿ ಜತೆಗೆ ಜೆಡಿಎಸ್‌ ಮೈತ್ರಿ ʼಜಸ್ಟ್‌ ಫಾರ್‌ ಎಲೆಕ್ಷನ್‌ʼ : ಜಿ.ಟಿ.ದೇವೇಗೌಡ

12:36 PM Feb 07, 2024 IST | mahesh
ಬಿಜೆಪಿ ಜತೆಗೆ ಜೆಡಿಎಸ್‌  ಮೈತ್ರಿ ʼಜಸ್ಟ್‌ ಫಾರ್‌ ಎಲೆಕ್ಷನ್‌ʼ    ಜಿ ಟಿ ದೇವೇಗೌಡ

ಮೈಸೂರು, ಫೆ.೦೭, ೨೦೨೪ : (www ̤ justkannada in news) :  ಎಚ್.ಡಿ.ಕುಮಾರಸ್ವಾಮಿ ಹಾಕಿದ್ದ   ಕೇಸರಿ ಟವೆಲ್ ಬಿಜೆಪಿಯವರ ಟವಲ್ ಅಲ್ಲ . ಅದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಒಬ್ಬ ಹುಡುಗ ಹಾಕಿದ ಟವೆಲ್.

ಮೈಸೂರಲ್ಲಿಂದು ಅಧಿಕಾರಿಗಳ ಸಭೆ ನಡೆಸಿದ ಮಾಜಿ ಶಾಸಕ ಜಿ.ಟಿ.ದೇವೇಗೌಡ. ಇದಕ್ಕೂ ಮುನ್ನ ಮಾಧ್ಯಮದವರ ಜತೆ ಮಾತನಾಡಿದರು.

ಎಚ್.ಡಿಕೆ ಕೇಸರಿ ಶಾಲು ಹಾಕಿದ ಬಗ್ಗೆ ಜೆಡಿಎಸ್‌ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಸಮಧಾನ ವ್ಯಕ್ತಪಡಿಸಿ ಬಹಿರಂಗವಾಗಿಯೇ ಆಕ್ಷೇಪಿಸಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿ, ಕುಮಾರಸ್ವಾಮಿ ಧರಿಸಿದ್ದ ಶಾಲು ಬಿಜೆಪಿಯವರದ್ದಲ್ಲ, ಆಂಜನೇಯನ ಭಕ್ತ ನೀಡಿದ ಶಾಲು. ಆದರೆ, ಕಾಂಗ್ರೆಸ್ ನವರು  ಅದನ್ನೇ ದೊಡ್ಡದು ಮಾಡಿದ್ದಾರೆ ಅಷ್ಟೆ ಎಂದು ಹೇಳುವ ಮೂಲಕ ಮಾಜಿ ಪ್ರಧಾನಿ ಆಕ್ಷೇಪಕ್ಕೆ ಪರೋಕ್ಷ ಅಸಮ್ಮತಿ ವ್ಯಕ್ತಪಡಿಸಿದರು.

ಜಸ್ಟ್‌ ಫಾರ್‌ ಎಲೆಕ್ಷನ್‌ :

ಬಿಜೆಪಿ ಜತೆಗೆ ಜೆಡಿಎಸ್‌ ಹೊಂದಾಣಿಕೆ ಲೋಕಸಭಾ ಚುನಾವಣಾ ಹಿತದೃಷ್ಟಿಯಿಂದ ಮಾತ್ರವಷ್ಟೆ. ಅದನ್ನು ಹೊರತು ಪಡಿಸಿ  ನಮ್ಮ‌ ತತ್ವ ಸಿದ್ದಾಂತವೇ ಬೇರೆ ಬಿಜೆಪಿ ತತ್ವ ಸಿದ್ದಾಂತವೇ ಬೇರೆ. ಜೆಡಿಎಸ್‌ ಮುಖಂಡ ಜಿ.ಟಿ.ದೇವೇಗೌಡ ಸ್ಪಷ್ಟನೆ.

ಜನತಾ ಪಕ್ಷ ಕಟ್ಟಿದ ಜಯ ಪ್ರಕಾಶ್ ನಾರಾಯಣ್,  ಪಕ್ಷ ಉಳಿಸಿ ಬೆಳೆಸಿದ  ಎಚ್.ಡಿ ದೇವೇಗೌಡರ ಹಾದಿಯಲ್ಲಿ ನಾವು ಸಾಗುತ್ತೇವೆ. ಮೈತ್ರಿ ಮಾಡಿಕೊಂಡಿರುವ ಮಾತ್ರಕ್ಕೆ ನಮ್ಮ ತತ್ವ ಸಿದ್ಧಾಂತ ಒಂದಿಂಚು ಕೂಡ ಬದಲಾಗಲ್ಲ. ಬಿಜೆಪಿಯವರದು ಅವರಿಗೆ ನಮ್ಮದು ನಮಗೆ. ಕೇವಲ ಚುನಾವಣಾ ದೃಷ್ಟಿಯಿಂದ ಮಾತ್ರ ನಾವು ಒಂದಾಗಿದ್ದೇವೆ.  ಮೈಸೂರಿನಲ್ಲಿ ಮಾಜಿ ಸಚಿವ ಜಿ ಟಿ ದೇವೇಗೌಡ ಹೇಳಿಕೆ.

ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾ.ಪಂ,ತಾಲೂಕು ಪಂಚಾಯತಿ ಮತ್ತು ಪಟ್ಟಣ ಪಂಚಾಯತಿ ಹಾಗೂ ನಗರಪಾಲಿಕೆ ಅಧಿಕಾರಿಗಳ ಸಮ್ಮುಖದಲ್ಲಿ ಮೂಲಭೂತ ಸಮಸ್ಯೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿ.ಟಿ.ದೇವೇಗೌಡ,  ಮುಂಬರುವ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ‌ ಸಮಸ್ಯೆ ಕುರಿತು ಗಂಭೀರವಾಗಿ ತಗೆದುಕೊಂಡು ಸಮಸ್ಯೆಗಳ ನಿವಾರಣೆಗೆ ಎಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಚರ್ಚಿಸಿದರು.

ಕೇಂದ್ರದ ವಿರುದ್ಧ ಪ್ರತಿಭಟನೆಗೆ ಸರಿಯಲ್ಲ :

ನಮ್ಮ ರಾಜ್ಯದಿಂದಲೇ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಂ ಅವ್ರು ನಾವು ಎಲ್ಲವನ್ನೂ ಕೊಟ್ಟಿದ್ದೇವೆ ಎನ್ನುತ್ತಾರೆ ಇವ್ರು ಕೊಟ್ಟಿಲ್ಲ ಎನ್ನುತ್ತಾರೆ. ಏನೇ ಇದ್ದರು ಕೂತು ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳಬಹುದಿತ್ತು. ಆದರೆ, ರಾಜ್ಯ ಸರ್ಕಾರ ಕೊಟ್ಟಿಲ್ಲ ಅಂತ ಹೇಳಿ ಪ್ರತಿಭಟನೆ ಮಾಡಲು ಮುಂದಾಗಿರುವುದು ಸರಿಯಲ್ಲ. ದೆಹಲಿಗೆ ಹೋಗಿ ಪ್ರತಿಭಟನೆ ಮಾಡುವ ಅಗತ್ಯ ಇರಲಿಲ್ಲ. ಮೈಸೂರಿನಲ್ಲಿ ಮಾಜಿ ಸಚಿವ ಜಿ ಟಿ  ದೇವೇಗೌಡ ಹೇಳಿಕೆ.

key words :̧  mysore ̲ jds ̲ bjp ̲ allience ̲ just ̲ for ̲ election ̲ g̤t̤devegowda

Tags :

.