HomeBreaking NewsLatest NewsPoliticsSportsCrimeCinema

ಎರಡು ಸಮುದಾಯಗಳ ನಡುವೆ ಘರ್ಷಣೆ: ಕಲ್ಲು ತೂರಾಟ.

11:04 AM Jan 30, 2024 IST | prashanth

ಮೈಸೂರು,ಜನವರಿ,30,2024(www.justkannada.in): ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಸಮುದಾಯಗಳ  ನಡುವೆ ಘರ್ಷಣೆ ಉಂಟಾಗಿ ಪರಸ್ಪರ ಮನೆಗಳಿಗೆ ಕಲ್ಲು ತೂರಾಟ ನಡೆದು ಹಲವರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.

ಹಲ್ಲರೆ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಎರಡೂ ಸಮುದಾಯದ ಬೀದಿಯಲ್ಲೂ ಕಲ್ಲು ತೂರಾಟ ನಡೆದಿದೆ. ಕೂಡಲೇ ನಂಜನಗೂಡು ಗ್ರಾಮಾಂತರ ಠಾಣಾ ಪೊಲೀಸ್ ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಬಂದ ಪೋಲಿಸರ ಮೇಲೂ ಕಲ್ಲೂ ತೂರಾಟ ನಡೆದಿದೆ.

ಎಎಸ್ಐ ಸೇರಿ ಕೆಲವು ಪೋಲಿಸರಿಗೆ ಗಾಯಗಳಾಗಿದೆ. ಸ್ಥಳಕ್ಕೆ ಎಸ್ಪಿ ಸೀಮಾ ಲಾಟ್ಕರ್, ಎಎಸ್ಪಿ ನಂದಿನಿ ಸೇರಿದಂತೆ ಉನ್ನತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: mysore- Clash-between-two communities- Stone pelting

Tags :
mysore- Clash-between-two communities- Stone pelting
Next Article