ಮೈಸೂರು ದಸರಾ 2024: ಯುವ ಸಂಭ್ರಮ ಪೋಸ್ಟರ್ ಹಾಗೂ ವೆಬ್ ಸೈಟ್ ಬಿಡುಗಡೆ
01:29 PM Sep 21, 2024 IST | prashanth
ಮೈಸೂರು ಸೆಪ್ಟಂಬರ್, 21,2024 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು ಇಂದು ಯುವ ಸಂಭ್ರಮದ ಪೋಸ್ಟರ್ ಬಿಡುಗಡೆ, ದಸರಾ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ, ಫೋಸ್ಟರ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Mysore Dasara 2024, Yuva Sambharama, poster, website