ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ಜಂಬೂ ಸವಾರಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ.
ಮೈಸೂರು,ಅಕ್ಟೋಬರ್,24,2023(www.justkannada.in): ಕ್ಯಾಪ್ಟನ್ ಅಭಿಮನ್ಯು ಹೊತ್ತ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ಧರಾಮಯ್ಯ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.
ಅರಮನೆ ಆವರಣದಲ್ಲಿ ನಿರ್ಮಿಸಲಾಗಿದ್ದ ವೇದಿಕೆ ಬಳಿಗೆ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ಚಿನ್ನದ ಅಂಬಾರಿ ಹೊತ್ತು ಆಗಮಿಸಿದ್ದು ಅಂಬಾರಿಯಲ್ಲಿ ಪ್ರತಿಷ್ಟಾಪಿಸಲಾದ ತಾಯಿ ಚಾಮುಂಡೇಶ್ವರಿಗೆ ಶುಭಮೀನ ಲಗ್ನದಲ್ಲಿ ಸಿಎಂ ಸಿದ್ಧರಾಮಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಸಿಎಂ ಸಿದ್ಧರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್, ರಾಜವಂಶಸ್ಥ ಯದುವೀರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಸಾಥ್ ನೀಡಿದರು.
ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡಿದೆ. ಸತತ 4ನೇ ಬಾರಿ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊತ್ತಿದ್ದು, ಜಂಬೂ ಸವಾರಿ ಮೆರವಣಿಗೆ, ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್, ತಿಲಕ್ ನಗರ, ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ. ಸುಮಾರು 5 ಕಿಲೋ ಮೀಟರ್ ಈ ಜಂಬೂ ಸವಾರಿ ನಡೆಯಲಿದೆ.
Key words: mysore dasara-jamboo savari-CM Siddaramaiah