For the best experience, open
https://m.justkannada.in
on your mobile browser.

ನಿಗದಿತ ಸಮಯಕ್ಕಿಂತ ತಡವಾಗಿ ಜಂಬೂಸವಾರಿಗೆ ಪುಷ್ಪಾರ್ಚನೆ...?

06:17 PM Oct 24, 2023 IST | prashanth
ನಿಗದಿತ ಸಮಯಕ್ಕಿಂತ ತಡವಾಗಿ ಜಂಬೂಸವಾರಿಗೆ ಪುಷ್ಪಾರ್ಚನೆ

ಮೈಸೂರು,ಅಕ್ಟೋಬರ್,24,2023(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಜಂಬೂಸವಾರಿ ಮೆರವಣಿಗೆ  ಚಾಮುಂಡಿಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ  ಚಾಲನೆ ನೀಡಿದರು. ಆದರೆ  ಈ ಬಾರಿ ನಿಗದಿತ ಸಮಯಕ್ಕಿಂತ ತಡವಾಗಿ ಪುಷ್ಪಾರ್ಚನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮೈಸೂರಿನಲ್ಲಿ ದಸರಾವನ್ನು ವೈಭವಪೂರಿತವಾಗಿ ಆಚರಿಸಲಾಗುತ್ತಿದ್ದು, ಇಂದು ಜಂಬೂಸವಾರಿ ಮೆರವಣಿಗೆಗೆ ಸಂಜೆ 4.40 ರಿಂದ 5 ಗಂಟೆಯೊಳಗೆ ಒಳಗೆ ಸಲ್ಲುವ ಮೀನ ಲಗ್ನದಲ್ಲಿ ಸಿಎಂ ಸಿದ್ಧರಾಮಯ್ಯ ಪುಷ್ಪಾರ್ಚನೆ ಮಾಡಬೇಕಿತ್ತು.

ಆದರೆ ನಿಗದಿತ ಸಮಯಕ್ಕೆ ಪುಷ್ಪಾರ್ಚನೆ‌ ಆಗದೆ 5 ಗಂಟೆ 9 ನಿಮಿಷಕ್ಕೆ ಅಂದರೆ 9 ನಿಮಿಷ ತಡವಾಗಿ ಪುಷ್ಪಾರ್ಚನೆ ನೆರವೇರಿದೆ ಎನ್ನಲಾಗಿದೆ.  ಇನ್ನು ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊತ್ತು ಸಾಗುತಿದ್ದು ಜಂಬೂಸವಾರಿ ಮೆರವಣಿಗೆ ಆಯುರ್ವೇದಿಕ್ ಸರ್ಕಲ್ ತಲುಪಿದೆ. ಬಳಿಕ ತಿಲಕ್ ನಗರ, ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪಕ್ಕೆ ತಲುಪಲಿದೆ.

Key words: mysore dasara- Jambusavari- later than - scheduled time

Tags :

.