For the best experience, open
https://m.justkannada.in
on your mobile browser.

ಕಬಿನಿ ಹಾಗೂ ನುಗು ಜಲಾಶಯಗಳಿಗೆ  ಜಿಲ್ಲಾಧಿಕಾರಿ ಭೇಟಿ:  ಮುಂಜಾಗ್ರತಾ ಕ್ರಮಕ್ಕೆ ಸೂಚನೆ

02:54 PM Jul 17, 2024 IST | prashanth
ಕಬಿನಿ ಹಾಗೂ ನುಗು ಜಲಾಶಯಗಳಿಗೆ  ಜಿಲ್ಲಾಧಿಕಾರಿ ಭೇಟಿ   ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಮೈಸೂರು ಜೂನ್,17,2024 (www.justkannada.in): ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ  ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು ಈ ಸಂಬಂಧ ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ಇಂದು ಬೀಚನಹಳ್ಳಿ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಮಾತನಾಡಿದ ಅವರು,  ಪೂರ್ವಭಾವಿಯಾಗಿ ಮುನ್ನೆಚ್ಚರಿಕಾ ಕ್ರಮವಾಗಿ  ಜನ ಹಾಗೂ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈಗಾಗಲೇ ತಾಲೂಕು ಆಡಳಿತದ ಅಧಿಕಾರಿಗಳು ಮುಳುಗಡೆ ಪ್ರದೇಶದ ಜನರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. 'ಕಬಿನಿ ಜಲಾಶಯದಿಂದ ನೀರು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು, ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಸರಗೂರು ತಹಶೀಲ್ದಾರ್ ರುಕಿಯಾ ಬೇಗಂ ಹಾಗೂ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Key words: mysore, DC, visit, Kabini, Nugu Dam

Tags :

.