ಮೈಸೂರು: 80 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಒಂದೇ ಕುಟುಂಬದ ನಾಲ್ವರು ಅಂದರ್
ಮೈಸೂರು,ಆಗಸ್ಟ್,26,2024 (www.justkannada.in): ಮೈಸೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಳ್ಳತನದಲ್ಲಿ ಭಾಗಿಯಾಗಿದ್ದ ಒಂದೇ ಕುಟುಂಬದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಒಂದೇ ಕುಟುಂಬದ ನಾಲ್ವರು 80 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆರೋಪಿಗಳನ್ನ ಬಂಧಿಸಿರುವ ಪೊಲೀಸರು ಬರೋಬ್ಬರಿ 45 ಲಕ್ಷ ಮೌಲ್ಯದ ಚಿನ್ನಾಭರಣ, ಮೂರು ಬೈಕ್, ಎರಡು ಪಿಸ್ತೂಲ್ ಗಳನ್ನ ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಬಂಧಿತ ಆರೋಪಿಗಳ ಬಳಿ ಇದ್ದ 4.6 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಬಂಧಿತ ನಾಲ್ವರು ಆರೋಪಿಗಳು ಅಪ್ಪ ಮಕ್ಕಳಾಗಿದ್ದು ಮೈಸೂರು ನಗರದವರು ಎನ್ನಲಾಗಿದೆ ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನಗಿಳಿದಿದ್ದರು. ಪ್ರಕರಣ ಭೇದಿಸಿದ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದು, ಆರೋಪಿ ನೀಡಿದ ಸುಳಿವಿನ ಮೇರೆಗೆ ಕಳ್ಳರ ಜಾಲ ಬಯಲಾಗಿದೆ.
ಮೈಸೂರು, ಮಂಡ್ಯ, ದಕ್ಷಿಣ ಕನ್ನಡ, ಕೊಡಗು ಭಾಗದಲ್ಲಿ ಕಳ್ಳತನ, ಸುಲಿಗೆ ಹಾಗೂ ವಾಹನ ಕಳವು ಪ್ರಕರಣಗಳು ದಾಖಲಾಗಿದೆ. ನಾಲ್ವರು ಆರೋಪಿಗಳ ಪೈಕಿ ಒಬ್ಬನ ಮೇಲೆ 3, ಮತ್ತೊಬ್ಬನ ಮೇಲೆ 36, ಇನ್ನೊಬ್ಬನ ಮೇಲೆ 17 ಪ್ರಕರಣಗಳು ದಾಖಲಾಗಿದ್ದವು. ಗಾಂಜಾ ಹೊಂದಿದ ಆರೋಪಿಯ ಮೇಲೆ 18 ಪ್ರಕರಣ ದಾಖಲಾಗಿದ್ದವು.
Key words: Mysore, Four members, same family , arrest