For the best experience, open
https://m.justkannada.in
on your mobile browser.

ನಾಳೆ ಮೈಸೂರಿನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

03:17 PM Jun 01, 2024 IST | prashanth
ನಾಳೆ ಮೈಸೂರಿನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮೈಸೂರು,ಜೂನ್,1,2024 (www.justkannada.in): 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ನಾಳೆ(ಜೂನ್ 2) ಸಂಜೆ 5 ಗಂಟೆಗೆ ನಿವೇದಿತ ನಗರದ ಎಸ್.ಆರ್.ಸುಬ್ಬರಾವ್ ಉದ್ಯಾನದಲ್ಲಿ ಆಯೋಜಿಸಲಾಗಿದೆ.

ನಗರ ಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್ ನೇತೃತ್ವದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ. ಶಾಸಕ ಜಿ.ಟಿ.ದೇವೇಗೌಡರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ವಿದ್ಯಾರ್ಥಿಗಳನ್ನು ಅಭಿನಂದಿಸಲಿದ್ದಾರೆ. ನೈಪುಣ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಘು ಆರ್.ಕೌಟಿಲ್ಯ ಶುಭನುಡಿಯಲ್ಲಿದ್ದಾರೆ. ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ವಿದ್ಯಾ ವಿಕಾಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕವೀಶ್ ಗೌಡ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಇದೇ ವೇಳೆ ಭಾರತೀಯ ಅರಣ್ಯ ಸೇವೆಗೆ 33ನೇ ‌ರ್ಯಾಂಕ್ (ಐಎಫ್‌ಎಸ್) ಪಡೆದಿರುವ ಸೌಮ್ಯಾ ರಾಂಪುರೆ ಅವರಿಗೆ ವಿಶೇಷ ಸನ್ಮಾನ ಕಾರ್ಯವೂ ನಡೆಯಲಿದೆ.

Key words: Mysore, honor, program, tomorrow

Tags :

.