HomeBreaking NewsLatest NewsPoliticsSportsCrimeCinema

ಸುಳ್ಳಿನ ಸವಾರಿ ಮಾಡಿಕೊಂಡು 10 ವರ್ಷ ಮುಗಿಸಿದ್ರು: ಯಾವ ಮುಖ ಹೊತ್ಕೊಂಡು ಮೈಸೂರಿಗೆ ಬರ್ತಾರೆ? ಮೋದಿ ವಿರುದ್ದ ಸಿಎಂ ಗುಡುಗು.

05:22 PM Apr 13, 2024 IST | prashanth

ಮೈಸೂರು ಏಪ್ರಿಲ್, 13,2024 (www.justkannada.in):  ಸುಳ್ಳು ಹೇಳಿದರೆ ಜನ ಮೋದಿ ಮೋದಿ ಅಂತಾರೆ  ಎನ್ನುವುದು ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರು ಸುಳ್ಳು ಹೇಳೋದನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಸುಳ್ಳಿನ ಸವಾರಿ ಮಾಡಿಕೊಂಡು 10 ವರ್ಷ ಮುಗಿಸಿದ್ರು: ಯಾವ ಮುಖ ಹೊತ್ಕೊಂಡು ಮೈಸೂರಿಗೆ ಬರ್ತಾರೆ?  ಎಂದು ಪ್ರಧಾನಿ ಮೋದಿ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೃಷ್ಣರಾಜದಲ್ಲಿ ನಡೆದ ಜನಧ್ವನಿ-2 ಯಾತ್ರೆಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಹಾಕ್ತೀನಿ ಅಂದ್ರು,

ವಿದೇಶದಿಂದ ಕಪ್ಪು ಹಣ ತರುತ್ತೇನೆ ಅಂದರು.  ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಅಂದರು.  ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದರು.  ಡೀಸೆಲ್- ಪೆಟ್ರೋಲ್-ಗ್ಯಾಸ್-ರಸಗೊಬ್ಬರದ ಬೆಲೆ ಕಡಿಮೆ ಮಾಡುತ್ತೇವೆ ಎಂದು  ಭರವಸೆ ನೀಡಿದ್ದರು. ಡಾಲರ್ ಎದುರು ರೂಪಾಯಿ ಮೌಲ್ಯ ಹೆಚ್ಚಿಸ್ತೀವಿ ಅಂದರು. ಹೀಗೆ ರಾಶಿ ರಾಶಿ ಸುಳ್ಳುಗಳ ಮೂಲಕವೇ ಭಾರತೀಯರನ್ನು ನಿರಂತರವಾಗಿ ಬಕ್ರಾ ಮಾಡಿ ವಂಚಿಸಿದರು. ಹತ್ತು ವರ್ಷಗಳ ಕಾಲ ನಿಮ್ಮನ್ನು ವಂಚಿಸಿದವರಿಗೇ ಮತ ಹಾಕೋಕೆ ನಿಮಗೆ ಮನಸ್ಸು ಬರತ್ತಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಮಾಡಿದವರು ಯಾರು, ಮಹಿಳಾ-ಮಕ್ಕಳ ಆಸ್ಪತ್ರೆ ಮಾಡಿದವರು ಯಾರು, ಶಾಲೆ-ಹಾಸ್ಟೆಲ್ ಗಳನ್ನು ಮಾಡಿದವರು ಯಾರು, ಮೈಸೂರಿನ ಅಭಿವೃದ್ಧಿಗೆ ಸಾವಿರಾರು ಕೋಟಿ ಹಣ ಕೊಟ್ಟ ಸರ್ಕಾರ ಯಾವುದು ಎನ್ನುವುದು ಮೈಸೂರಿನ ಪ್ರತಿ ಪ್ರಜ್ಞಾವಂತರಿಗೂ ಗೊತ್ತು. ನಾವು ಮಾಡಿದಷ್ಟು ಕೆಲಸವನ್ನು ಮಾಡಲು ಬಿಜೆಪಿಗೂ ಅವಕಾಶ ಇತ್ತು. ಜನ ಅವಕಾಶ ಕೊಟ್ಟಿದ್ದರು. ಆದರೆ ಈ ಅವಕಾಶ ಸಿಕ್ಕಾಗ ಬಿಜೆಪಿ ಸಂಸದರು ಕೆಲಸ ಮಾಡಲಿಲ್ಲ.  ಹೀಗಾಗಿ ನುಡಿದಂತೆ ನಡೆದು ಅಭಿವೃದ್ಧಿಯ ದಿಕ್ಕಲ್ಲಿ ಮುನ್ನುಗ್ಗುತ್ತಿರುವ ನಮಗೆ ಅವಕಾಶ ಕೊಡಿ. ಸಾಮಾನ್ಯ ಕಾರ್ಯಕರ್ತರಾಗಿ ಹೋರಾಟ, ಪ್ರತಿಭಟನೆಗಳಿಂದ ಬೆಳೆದ ಎಂ.ಲಕ್ಷ್ಮಣ್ ಅವರನ್ನು ಈ ಬಾರಿ ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಬಿಜೆಪಿಗೆ ಮೈಸೂರು-ಕೊಡಗಿನ ಜನತೆ ಅವಕಾಶ ಕೊಟ್ಟಾಗ ಬಿಜೆಪಿ ಸಂಸದರು, ಶಾಸಕರು, ಮುಖ್ಯಮಂತ್ರಿಗಳು, ಪ್ರಧಾನ ಮಂತ್ರಿಗಳು ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲಿಲ್ಲ.  ಈಗ ಕೇವಲ ಅಭ್ಯರ್ಥಿಯನ್ನು ಬದಲಾಯಿಸಿ ಮತ ಕೇಳುತ್ತಿದ್ದಾರೆ. ಇದು ಹೊಣೆಗೇಡಿತನ ಅಲ್ಲವೇ ಎಂದು ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ ಬಡವರು, ದುಡಿಯವ ವರ್ಗಗಳ ಪರವಾಗಿ, ಮಹಿಳೆಯರ ಪರವಾಗಿ ಮಾಡಿದ ಒಂದೇ ಒಂದು ಕೆಲಸ ಯಾರಿಗಾದರೂ ಗೊತ್ತಾ ಎಂದು ಪ್ರಶ್ನಿಸಿದ  ಸಿಎಂ ಸಿದ್ದರಾಮಯ್ಯ, ಕೇವಲ ಸುಳ್ಳುಗಳನ್ನು ಸೃಷ್ಟಿಸಿ, ಭಾವನಾತ್ಮಕವಾಗಿ ಕೆರಳಿಸುವವರಿಗೆ ಮತ ಹಾಕಿದರೆ ನೀವು ಮೋಸಹೋದಂತೆ ತಾನೇ ಎಂದು ಪ್ರಶ್ನಿಸಿದರು.

ಮತ ಕೇಳೋದಕ್ಕೆ ಮೋದಿಯವರಿಗೆ ಮುಖ ಇದೆಯಾ?

ನಾಳೆ ಮೈಸೂರಿಗೆ ಬರುತ್ತಿರುವ ಮೋದಿಯವರು ಯಾವ ಮುಖ ಇಟ್ಟುಕೊಂಡು ಮತ ಕೇಳ್ತಾರೆ. ಮೋದಿಯವರಾಗಲೀ, ಇವರ ಸಂಸದರಾಗಲೀ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ. ಬರೀ ಸುಳ್ಳುಗಳ ಸವಾರಿ ಮಾಡಿಕೊಂಡು 10 ವರ್ಷ ಮುಗಿಸಿದರು.  ಹೀಗಿದ್ದಾಗ ಮೋದಿಯವರು ಯಾವ ಮುಖ ಹೊತ್ಕೊಂಡು ರಾಜ್ಯಕ್ಕೆ ಬರ್ತಾರೆ? ಯಾವ ಮುಖ ಹೊತ್ತಕೊಂಡು ಮತ ಕೇಳುತ್ತಾರೆ ಎಂದು  ಸಿಎಂ ಗುಡುಗಿದರು.

ಇಂದಿರಾಗಾಂಧಿ 20 ಅಂಶಗಳ ಕಾರ್ಯಕ್ರಮ ಕೊಟ್ಟರು. ಮೋದಿ ಒಂದಂಶದ ಕಾರ್ಯಕ್ರಮವನ್ನೂ ಕೊಡಲಿಲ್ಲ.

ಸ್ವಾತಂತ್ರ್ಯಾ ನಂತರ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಕಾಂಗ್ರೆಸ್. ಬಡತನ ನಿರ್ಮೂಲನೆಗೆ ಇಂದಿರಾಗಾಂಧಿಯವರು 20 ಅಂಶಗಳ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದರು. ಕೇವಲ ಅತ್ಯಂತ ಶ್ರೀಮಂತರಿಗಾಗಿ ಕೆಲಸ ಮಾಡಿದ ಮೋದಿ ಬಡವರಿಗಾಗಿ, ಬಡತನ ಹೋಗಲಾಡಿಸಲು ಒಂದಂಶದ ಕಾರ್ಯಕ್ರಮವನ್ನೂ ಏಕೆ ಕೊಡಲಿಲ್ಲ ಎಂದು ಪ್ರಶ್ನಿಸಿದ  ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಒಂದೂ ಸೀಟು ಕೊಡಬೇಡಿ ಎಂದು ಕರೆ ನೀಡಿದರು.‌

ENGLISH SUMMARY...

How can Modi come to Mysore and seek vote, who rode on just lies in the 10 years of power ?: CM Siddaramaiah questions

People still call Modi Modi, even if he lies, hence he has increased his lying: CM Siddaramaiah

Mysuru April 13:Chief Minister Siddaramaiah lashed out at Modi saying that that people call Modi Modi though he is lying and therefore he has increased his lying.

He was speaking while inaugurating the grand convention of Janadhwani-2 Yatra held at Krishnaraja of Mysore-Kodagu Lok Sabha constituency.

Modi said that he would remit Rs.15 lakhs to every Indian's account by getting the black money from abroad, double the income of farmers, create 2 crore jobs per year, reduce the price of diesel-petrol-gas-fertilizers.
He said that the value of the rupee will increase against the dollar. Indians were constantly deceived and cheated through many lies. Would mind voting for someone who cheated you for ten years, CM asked.

Every intelligent person in Mysuru knows who built the Jayadeva Hospital, who built the women and children's hospital, who built the schools and hostels, which government gave thousands of crores for the development of Mysuru. BJP also had the opportunity to do as much work as we did. People had given them a chance. But BJP MPs did not work when they got this opportunity. So give us a chance to do as we promised and advance in the direction of development. He called on to make M. Laxman, who grew from an ordinary party worker from struggles and protests, win this time.

People of Mysore-Kodagu gave an opportunity for BJP, the BJP MPs, MLAs, Chief Ministers and Prime Ministers did not work for the development of the constituency. Now they are just changing the candidate and asking for votes. He questioned if this is not a irresponsibility.

The CM asked if anyone knows a single thing that Prime Minister Narendra Modi has done in favour of the poor, working class and women, he said that it is as good as getting cheated if you vote for those who are not lied and just stirred you emotionally.

Does Modi have the face to ask for votes?

Modi is visiting Mysuru tomorrow, with what face will Modi ask for votes? Let Modi and his MPs show what they have done for Mysuru .After riding on lies for 10 years, with what face will Modi visit the state? The CM asked.

Indira Gandhi gave a 20-point programme. Modi did not give a single programme

Congress laid the foundation for the development of the country after independence. Indira Gandhi formulated and implemented 20-point programmes to eradicate poverty. The chief minister asked why Modi, who worked only for the rich, did not give even one-point programme for the poor, to eradicate poverty, and called upon the people not to give a single seat to BJP.

Key words: mysore, PM, Modi, CM, Siddaramaiah

 

Tags :
mysore-PM-Modi- lies-CM-Siddaramaiah
Next Article