ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹುಲಿ ದಾಳಿ: ಮಹಿಳೆ ಸ್ಥಿತಿ ಗಂಭೀರ.
05:57 PM Jan 03, 2024 IST
|
prashanth
ಮೈಸೂರು, ಜನವರಿ,3,2024(www.justkannada.in): ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹುಲಿ ದಾಳಿ ನಡೆಸಿದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲೋಕೇಶ್ ನಾಯಕ ಪತ್ನಿ ಶಿವಮಲ್ಲಮ್ಮ ಹುಲಿದಾಳಿಗೆ ಸಿಲುಕಿ ಗಂಭೀರ ಗಾಯಗೊಂಡವರು. ಇಂದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಲೆ ಹುಲಿ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿರುವ ಶಿವಮಲ್ಲಮ್ಮ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಲವು ದಿನಗಳ ಹಿಂದೆ ಹೆಡಿಯಾಲ ಬಳಿ ಹುಲಿ ದಾಳಿಗೆ ವ್ಯಕ್ತಿ ಬಲಿಯಾಗಿದ್ದರು. ಇದೀಗ ರೈತ ಮಹಿಳೆ ಮೇಲೆ ಹುಲಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಲಿ ಸೆರೆ ಹಿಡಿಯದ ಅರಣ್ಯಾಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Key words: mysore- Tiger -attack - Woman's- condition -critical.
Next Article