ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ: ನಾಳೆ ಅಂತ್ಯಕ್ರಿಯೆ.
10:27 AM Apr 29, 2024 IST
|
prashanth
ಮೈಸೂರು,ಏಪ್ರಿಲ್,29,2024 (www.justkannada.in): ಅನಾರೋಗ್ಯದಿಂದ ಬಳಲುತ್ತಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದು, ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ.
ಈ ಕುರಿತು ಶ್ರೀನಿವಾಸ್ ಪ್ರಸಾದ್ ಪುತ್ರಿ ಪ್ರತಿಮಾ ಪ್ರಸಾದ್ ಮಾಹಿತಿ ನೀಡಿದ್ದು, ಬೌಧ್ದ ಧರ್ಮದ ವಿಧಿ ವಿಧಾನದಂತೆ ನಾಳೆ ಅಂತ್ಯಕ್ರಿಯೆ ನಡೆಯಲಿದೆ. ಅವರು ಬೌದ್ದ ಧರ್ಮ ಅನುಯಾಯಿಯಾಗಿದ್ರು. ಇಂದು ಮಧ್ಯಾಹ್ನ 1 ಗಂಟೆವರೆಗೆ ಜಯಲಕ್ಷ್ಮಿ ಪುರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಶೋಕಪುರಂನ ಎನ್.ಟಿ.ಎಂ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.
ನಾಳೆ ಅಶೋಕ್ ಪುರಂನಲ್ಲಿ ಪಾರ್ಥೀವ ಶರೀರದ ಮೆರವಣಿಗೆ ಮಾಡಲಾಗುತ್ತದೆ. ಬಳಿಕ ಸಿಲ್ಕ್ ಫ್ಯಾಕ್ಟರಿ ಸರ್ಕಲ್ ಬಳಿ ಡಾ.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಪ್ರತಿಮಾ ಪ್ರಸಾದ್ ತಿಳಿಸಿದ್ದಾರೆ.
Key words: mysore, V. Srinivas Prasad, passes away
Next Article