HomeBreaking NewsLatest NewsPoliticsSportsCrimeCinema

ಸಹಜ ಸ್ಥಿತಿಗೆ ನಾಗಮಂಗಲ: ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ

10:26 AM Sep 14, 2024 IST | prashanth

ಬೆಂಗಳೂರು,ಸೆಪ್ಟಂಬರ್,14,2024 (www.justkannada.in): ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆಯಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದ ಮಂಡ್ಯ ಜಿಲ್ಲೆಯ ನಾಗ ಮಂಗಲ ಇದೀಗ  ಸಹಜ ಸ್ಥಿತಿಗೆ ಮರಳಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಾಗಮಂಗಲ ಸಹಜ ಸ್ಥಿತಿಗೆ  ಮರಳುತ್ತಿದೆ. ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.  ಶಾಂತಿ ಸಭೆ ನಡೆಸೋದಕ್ಕೆ ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.

ನಾಗಮಂಗಲ ಸಹಜಸ್ಥಿತಿಗೆ ಬಂದಿದ್ದು,  ಪಟ್ಟಣದ ರಸ್ತೆಗಳಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ ಆಯಕಟ್ಟಿನ ಸ್ಥಳಗಳಲ್ಲಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.

Key words: Nagamangala, normal, Police security, minister, Parameshwar

Tags :
ministerNagamangalanormalParameshwarPolice security
Next Article