ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ಆಗ್ರಹ ವಿಚಾರ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸಮರ್ಥನೆ.
ಮೈಸೂರು,ಡಿಸೆಂಬರ್,18,2023(www.justkannada.in): ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ಚಳಿಗಾಲದ ಅಧಿವೇಶನದಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಆಗ್ರಹಿಸಿದ್ದರು. ಆದರೆ ಇದಕ್ಕೆ ಬಿಜೆಪಿ ನಾಯಕರು ವಿರೋಧಿಸಿದ್ದು ಈ ಕುರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿರುವ ಸಚಿವ ಹೆಚ್.ಸಿ ಮಹದೇವಪ್ಪ, ಟಿಪ್ಪು ಸುಲ್ತಾನ್ ಮೈಸೂರಿನವನು. ಅವರ ಹೆಸರು ಇಡುವುದರಲ್ಲಿ ತಪ್ಪೇನಿದೆ ? ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಲ್ವ ? ಮಲಬಾರ್ ನಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಮಾಡಲಿಲ್ವ ? ಭೂ ಸುಧಾರಣಾ ಕಾಯ್ದೆ ಜಾರಿಗೆ ತರಲಿಲ್ವ ? ದೇಶಕ್ಕೆ ರೇಷ್ಮೆ ಪರಿಚಯಿಸಿದ್ದು ಯಾರು ? ಎಂದು ಪ್ರಶ್ನಿಸುವ ಮೂಲಕ ಸಮರ್ಥಿಸಿಕೊಂಡರು.
ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವುದು ಅಥವಾ ಬಿಡುವುದು ಬೇರೆ ವಿಚಾರ. ಟಿಪ್ಪು ಸುಲ್ತಾನ್ ಹೆಸರು ಹೇಳಿದ ಕೂಡಲೇ ಯಾಕೆ ವಿರೋಧ ಮಾಡ್ತಾರೆ ? ಸಂವಿಧಾನದ ಪ್ರಕಾರ ಎಲ್ಲ ಧರ್ಮಗಳೂ ಸಮ. ವಿಮಾನ ನಿಲ್ದಾಣಕ್ಕೆ ಹೆಸರಿಡಲು ನಮ್ಮ ಸರ್ಕಾರವೇ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಶಿಫಾರಸು ಮಾಡಲಾಗಿದೆ. ನಾಲ್ವಡಿ ಹೆಸರು ಇಡುವುದಕ್ಕೆ ನನ್ನ ತಕರಾರು ಇಲ್ಲ. ಚರ್ಚೆಯನ್ನೇ ಮಾಡಬಾರದು ಎಂದರೆ ಹೇಗೆ ? ಎಂದು ಸಚಿವ ಡಾ.ಹೆಚ್ ಸಿ ಮಹದೇವಪ್ಪ ಪ್ರಶ್ನೆಗಳನ್ನ ಹಾಕಿದರು.
ಇನ್ನು ರೂಪಾಂತರ ಕೋವಿಡ್ ಆತಂಕ ಹಿನ್ನೆಲೆ ಮೈಸೂರು ಜಿಲ್ಲಾಡಳಿತದ ಜತೆಗೆ ಸಭೆ ಮಾಡುತ್ತೇನೆ. ಗಡಿ ಜಿಲ್ಲೆಯಾದ ಕಾರಣ ಇವತ್ತೇ ಸಭೆ ಮಾಡುತ್ತೇನೆ ಎಂದು ಹೆಚ್.ಸಿ ಮಹದೇವಪ್ಪ ತಿಳಿಸಿದರು.
ಸಂಸತ್ ನಲ್ಲಿ ಸ್ಮೋಕ್ ಬಾಂಬ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಹೆಚ್.ಸಿ ಮಹದೇವಪ್ಪ, ಇದು ಗಂಭೀರವಾದ ರಾಷ್ಟ್ರೀಯ ಭದ್ರತಾ ವಿಚಾರ. ಆರೋಪಿಗಳಿಗೆ ಬೇರೆಯವರು ಲೆಟರ್ ಕೊಟ್ಟಿದ್ದರೆ ಮೈಸೂರು ಗತಿ ಏನಾಗುತ್ತಿತ್ತು? ಬೇರೆ ಧರ್ಮದವರು ಲೆಟರ್ ಕೊಟ್ಟಿದ್ದರೆ ಗತಿ ಏನಾಗುತ್ತಿತ್ತು? ಲೆಟರ್ ಕೊಟ್ಟಿದ್ದ ಕಾರಣ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಒಂದೊಂದು ಬಾರಿ ಗಡಿಪಾರು ಆದವರು, ಕೊಲೆ ಆರೋಪಿಗಳು ನಮ್ಮ ಜತೆಯೇ ಫೋಟೋ ತೆಗೆಸಿ ಕೊಂಡಿರುತ್ತಾರೆ. ಅದನ್ನು ನಾವು ಗಮನಿಸೋಕೆ ಆಗುತ್ತಾ? ಇದು ಅದೇ ರೀತಿ ಅಷ್ಟೆ ಎಂದರು.
Key words: name -Mysore Airport –Tipu- Minister -Dr. HC Mahadevappa