ರಾಜ್ಯದ ಜನತೆಗೆ ಮತ್ತೊಂದು ಶಾಕ್: ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ
ರಾಮನಗರ, ಸೆಪ್ಟೆಂಬರ್ 13,2024 (www.justkannada.in): ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ರಾಜ್ಯದ ಜನತೆಗೆ ಇದೀಗ ರಾಜ್ಯ ಸರ್ಕಾರ ಹಾಲಿನ ದರ ಏರಿಕೆಯ ಬರೆ ಎಳೆಯಲು ಮುಂದಾಗಿದೆ. ಹೌದು, ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ , ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದು ಹೇಳಿದ್ದಾರೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ತಿಳಿಸಿದರು.
ನೀವೆಲ್ಲ ರೈತರ ಮಕ್ಕಳಿದ್ದಾರೆ, 3 ರೂಪಾಯಿ ಹೆಚ್ಚಳ ಮಾಡಿದರೆ ಅಥವಾ ಏನೇ ಹೆಚ್ಚು ಮಾಡಿದ್ರೂ ಲಬ್ಬೊ ಲಬ್ಬೋ ಅಂತಾ ಹೇಳುತ್ತಾರೆ. ನಾವು ರೈತರ ಮಕ್ಕಳು, ರೈತರು ಮಕ್ಕಳು ಎಂದು ಹೇಳುತ್ತಾರೆ. ಆದರೆ ರೈತರ ಮಕ್ಕಳಿಗೆ ನೀವೇನಾದ್ರೂ ಕೊಟ್ಟಿದ್ದೀರಾ? ಏನೂ ಮಾಡದೇ ನಾವು ರೈತರ ಮಕ್ಕಳು ಅಂತಾ ಹೇಳುತ್ತಾರೆ ಎಂದು ಜೆಡಿಎಸ್ ವಿರುದ್ದ ಹರಿಹಾಯ್ದರು.
Key words: Nandini milk, price hike, CM Siddaramaiah