For the best experience, open
https://m.justkannada.in
on your mobile browser.

ನಂಜನಗೂಡು ತಗ್ಗು ಪ್ರದೇಶಗಳಿಗೆ ಭೇಟಿ, ಪರಿಶೀಲನೆ: ತುರ್ತು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

06:15 PM Jul 17, 2024 IST | prashanth
ನಂಜನಗೂಡು ತಗ್ಗು ಪ್ರದೇಶಗಳಿಗೆ ಭೇಟಿ  ಪರಿಶೀಲನೆ  ತುರ್ತು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಮೈಸೂರು ಜುಲೈ,17,2024 (www.justkannada.in): ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಳದಿಂದ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟ ಮತ್ತು ತಗ್ಗು ಪ್ರದೇಶಗಳು ಮುಳುಗಡೆಯಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಹಳ್ಳಿಕೇರಿ, ಹದಿನಾರು ಕಾಲು ಮಂಟಪ, ಸ್ನಾನಘಟ್ಟ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತುರ್ತು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ ನೀಡಿದರು.

ನಂಜನಗೂಡು ತಾಲ್ಲೂಕಿನ ಕಡಜಟ್ಟಿ ಗ್ರಾಮ, ಹುಲ್ಲಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು, ಹುಲ್ಲಹಳ್ಳಿ ಮೈಸೂರು ಸೇತುವೆ, ಬೊಕ್ಕಹಳ್ಳಿ, ಕುಳ್ಳಂಕಯ್ಯನ ಹುಂಡಿ, ಕಪಿಲಾ ನದಿ ಸ್ನಾನಘಟ್ಟಗಳಿಗೆ ತೆರಳಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ನಗರದ ಹಳ್ಳದಕೇರಿ ಬಡಾವಣೆಯಲ್ಲಿ ಸಾರ್ವಜನಿಕರೊಂದಿಗೆ ಮಾತನಾಡಿ ಸಮಸ್ಯೆಗಳನ್ನು ಆಲಿಸಿದರು.  ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ನಗರಸಭಾ ಆಯುಕ್ತ ನಂಜುಂಡಸ್ವಾಮಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Key words: Nanjangudu, rain, visit , mysore DC, Lakshmikanth Reddy

Tags :

.