HomeBreaking NewsLatest NewsPoliticsSportsCrimeCinema

ಉಚಿತ ಕೊಡುಗೆ ಟೀಕಿಸುವ ನಾರಾಯಣಮೂರ್ತಿ ಅವರು ಕೇಂದ್ರದ ನಿಲುವು ಏಕೆ ಖಂಡಿಸಿಲ್ಲ- ಸಚಿವದ್ವಯರಿಂದ ವಾಗ್ದಾಳಿ.

01:52 PM Dec 01, 2023 IST | prashanth

ಬೆಂಗಳೂರು,ಡಿಸೆಂಬರ್,1,2023(www.justkannada.in): ಸರ್ಕಾರದ ಉಚಿತ ಕೊಡುಗೆಗಳನ್ನು ಟೀಕಿಸಿರುವ ಇನ್ಫೋಸಿಸ್ ಸಂಸ್ಥೆಯ ನಾರಾಯಣ್ ಮೂರ್ತಿ ಅವರ ವಿರುದ್ದ   ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ, ಪಶುಸಂಗೋಪನೆ ಸಚಿವ  ಕೆ.ವೆಂಕಟೇಶ್ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಸಚಿವದ್ವಯರು, ಬಡವರಿಗೆ ನೀಡುವ ಉಚಿತ ಯೋಜನೆಗಳ ಬಗ್ಗೆ ಮಾತನಾಡುವ ನಾರಾಯಣಮೂರ್ತಿ ಅವರು, ಕಾರ್ಪೊರೇಟ್ ಸಂಸ್ಥೆಗಳ ಸಾವಿರಾರು ಕೋಟಿ ಸಾಲ ಮನ್ನಾ ಮಾಡಿರುವ ಕೇಂದ್ರ ಸರ್ಕಾರದ ನಿಲುವನ್ನು ಏಕೆ ಖಂಡಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಬಡವರ ಕಷ್ಟ ನಿವಾರಣೆಗಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ನಾರಾಯಣಮೂರ್ತಿಗೆ ಬಡವರ ಕಷ್ಟ ಗೊತ್ತಿಲ್ಲ. ಹಾಗಾಗಿ ಉಚಿತ ಕೊಡುಗೆಗಳನ್ನು ನೀಡದಂತೆ ಹೇಳಿದ್ದಾರೆ. ಉಚಿತ ಕೊಡುಗೆಗಳ ವಿಚಾರದಲ್ಲಿ ನಾರಾಯಣಮೂರ್ತಿಯವರು ನೀಡಿರುವ ಹೇಳಿಕೆ ಸಾಮಾಜಿಕ ನ್ಯಾಯಕ್ಕೆ ವಿರುದ್ಧ ಆಗಿದೆ ಎಂದು  ಕಿಡಿಕಾರಿದರು.

ಭ್ರೂಣಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ- ಸಚಿವ ಹೆಚ್.ಸಿ ಮಹದೇವಪ್ಪ.

ಭ್ರೂಣಹತ್ಯೆ ದಂಧೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಚಿವ ಹೆಚ್.ಸಿ ಮಹದೇವಪ್ಪ, ಭ್ರೂಣಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಭ್ರೂಣಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸಿಐಡಿ ತನಿಖೆಗೆ ಆದೇಶಿಸಿದೆ.  ಭ್ರೂಣ ಪತ್ತೆ ಮತ್ತು ಹತ್ಯೆ ಎರಡೂ ಕೂಡ ಕಾನೂನು ಬಾಹಿರ. ಈ‌ ಪ್ರಕಣರದಲ್ಲಿ ಭಾಗಿಯಾಗಿರುವವರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ. ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಕಟ್ಟು‌ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗದಿದ್ದರೂ, ಒಂದು ರೀತಿಯ ಹವಾ ಸೃಷ್ಟಿಯಾಗಬಹುದು. ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟವಾಗಿ ಮೇಲುಗೈ ಸಾಧಿಸಲಿದೆ. ಬಹುತೇಕ ಮತಗಟ್ಟೆ ಸಮೀಕ್ಷೆಗಳು ಕೂಡ ಇದನ್ನೇ ಹೇಳಿವೆ. ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಮುಂದಿನ‌ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗುವುದಿಲ್ಲ. ಆದರೆ ಒಂದು ರೀತಿಯ ಟ್ರೆಂಡ್ ಸೃಷ್ಟಿಯಾಗಲಿದೆ ಎಂದು ಸಚಿವ ಡಾ ಹೆಚ್ ಸಿ ಮಹದೇವಪ್ಪ  ಹೇಳಿದರು.

Key words: Narayanamurthy,-criticizes - free guarantee- minister –HC mahadevappa-K.Venkatesh

Tags :
-criticizes - free guarantee- minister –HC mahadevappa-K.VenkateshNarayanamurthy
Next Article