For the best experience, open
https://m.justkannada.in
on your mobile browser.

 18ನೇ ಲೋಕಸಭೆ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ: ಜೂ.9 ರಂದು ಪ್ರಧಾನಿ ಆಗಿ ಪ್ರಮಾಣ ವಚನ ಸಾಧ್ಯತೆ.

01:26 PM Jun 07, 2024 IST | prashanth
 18ನೇ ಲೋಕಸಭೆ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ  ಜೂ 9 ರಂದು ಪ್ರಧಾನಿ ಆಗಿ ಪ್ರಮಾಣ ವಚನ ಸಾಧ್ಯತೆ

ನವದೆಹಲಿ,ಜೂನ್,7,2024 (www.justkannada.in): 18ನೇ ಲೋಕಸಭೆ ನಾಯಕರಾಗಿ ನರೇಂದ್ರ ಮೋದಿ ಅವರನ್ನ ಎನ್ ಡಿಎ ಸಂಸದರು ಆಯ್ಕೆಯಾಗಿದ್ದಾರೆ.

ಈ ಮೊದಲು ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎನ್‌ಡಿಎ ನಾಯಕರು ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಿದ್ದರು. ಇಂದು ಹಳೆ ಸಂಸತ್ ಭವನದಲ್ಲಿ ಸಭೆ ನಡೆಯಿತು. ಸಭೆಯಲ್ಲಿ  ಅಧಿಕೃತವಾಗಿ ಎನ್​ಡಿಎಯ ಎಲ್ಲಾ ಸಂಸದರು ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ.

ಇನ್ನೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಮನವಿ ಮಾಡಲಿದ್ದಾರೆ ಅದಾದ ಬಳಿಕ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಲು ಒಪ್ಪಿಗೆ ನೀಡಲಿದ್ದಾರೆ.

ಜೂನ್ 9 ರಂದು ಸಂಜೆ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ  ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

Key words: Narendra Modi, elected, 18th Lok Sabha, leader

Tags :

.