ಚುನಾವಣಾ ಕರ್ತವ್ಯ ನಿರ್ಲಕ್ಷ್ಯ ಆರೋಪ: ಉಪನ್ಯಾಸಕ ಅಮಾನತು.
11:29 AM Apr 05, 2024 IST
|
prashanth
ರಾಮನಗರ, ಏಪ್ರಿಲ್,5, 2024 (www.justkannada.in): ಚುನಾವಣಾ ಕರ್ತವ್ಯಕ್ಕೆ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಉಪನ್ಯಾಸಕರೊಬ್ಬರನ್ನ ಅಮಾನತು ಮಾಡಿ ರಾಮನಗರ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಆದೇಶ ಹೊರಡಿಸಿದ್ದಾರೆ.
ಕುದೂರು ಸರ್ಕಾರಿ ಪಿಯುಸಿ ಕಾಲೇಜಿನ ಉಪನ್ಯಾಸಕ ಕುಮಾರ್ ಅಮಾನತಾದವರು. ಅಂಚೆ ಮತಪತ್ರ ನಿರ್ವಹಣೆಗಾಗಿ ಕುಮಾರ್ ಅವರನ್ನ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನಿಯೋಜನೆ ಮಾಡಲಾಗಿತ್ತು. ಆದರೆ ಕುಮಾರ್ ಚುನಾವಣಾ ಪ್ರಕ್ರಿಯೆ ಸಭೆಗೆ ಹಾಜರಾಗದ ಹಿನ್ನೆಲೆ ಅಮಾನತು ಮಾಡಿ ರಾಮನಗರ ಮುಖ್ಯ ಚುನಾವಣಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.
Key words: neglect, election duty, suspended
Next Article