ಕೇಂದ್ರ ಬಜೆಟ್: ಆದಾಯ ತೆರಿಗೆ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ
12:17 PM Feb 01, 2024 IST
|
prashanth
ನವದೆಹಲಿ,ಫೆಬ್ರವರಿ,1,2024(www.justkannada.in): ಲೋಕಸಭೆ ಚುನಾವಣೆ ಸಮೀಪ ಹಿನ್ನೆಲೆ ಇಂದು ಕೇಂದ್ರ ಹಣಕಾಸು ಸಚಿವೆ ಕೇಂದ್ರ ಮಧ್ಯಂತರ ಬಜೆಟ್ ಅನ್ನು ಮಂಡಿಸಿದ್ದು ಈ ನಡುವೆ ಆದಾಯ ತೆರಿಗೆ ನೀತಿಯಲ್ಲಿ ಯಾವುದೇ ವಿನಾಯಿತಿ ಘೋಷಣೆ ಮಾಡಿಲ್ಲ.
ಲೋಕಸಭೆಯಲ್ಲಿ ಇಂದು ಮಧ್ಯಂತರ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆದಾಯ ತೆರಿಗೆ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. 7 ಲಕ್ಷ ಆದಾಯ ಇರುವವರಿಗೆ ತೆರಿಗೆ ಇಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ 7 ಲಕ್ಷ ಆದಾಯ ಇರುವವರಿಗೆ ತೆರಿಗೆ ವಿನಾಯಿತಿ ಇದೆ.
ಇನ್ನು ಕಾರ್ಪೋರೇಟ್ ಟ್ಯಾಕ್ಸ್ ಅನ್ನು ಶೇ.30ರಿಂದ ಶೇ22ಕ್ಕೆ ಇಳಿಕೆ ಮಾಡಲಾಗಿದೆ. ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3 ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.
Key words: No change - income tax -policy-Central Minister Nirmala Sitharaman
Next Article