ಇಂಡಿಯಾ ಮೈತ್ರಿಕೂಟ ಒಂದಾಗುವ ಗ್ಯಾರಂಟಿ ಇಲ್ಲ-ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯ.
ಬೆಂಗಳೂರು, ಜನವರಿ,24,2024(www.justkannada.in): ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ವಿಪಕ್ಷ ನಾಯಕ ಆರ್.ಅಶೋಕ್, ಮೈತ್ರಿಕೂಟ ಒಂದಾಗುವ ಗ್ಯಾರಂಟಿ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾತನಾಡಿದ ಆರ್. ಅಶೋಕ್, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಷ್ಟು ಸ್ಥಾನಗಳನ್ನು ಗೆಲ್ಲುತ್ತದೆಯೋ ಅಷ್ಟು ಸ್ಥಾನ ನಾನು ಪಶ್ಚಿಮ ಬಂಗಾಳದಲ್ಲಿ ಗೆಲ್ಲುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಿಜ ಸ್ಥಿತಿಯೂ ಹಾಗೆ ಇದೆ. ಸಂಸತ್ ನಲ್ಲಿ ವಿಪಕ್ಷ ನಾಯಕನಾಗುವ ಯೋಗ್ಯತೆ ಕಾಂಗ್ರೆಸ್ ಪಕ್ಷಕ್ಕಿಲ್ಲ ಎಂದು ಟೀಕಿಸಿದರು.
ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಪಸ್ ಆಗುತ್ತಾರೆಯೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಆರ್.ಅಶೋಕ್, ಶೆಟ್ಟರ್ ಮತ್ತೆ ಬಿಜೆಪಿಗೆ ಬರುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ಪಾಪ ಶೆಟ್ಟರ್ ಕಾಂಗ್ರೆಸ್ ಪಕ್ಷದಲ್ಲಿ ಮೂಲೆಗುಂಪಾಗಿದ್ದಾರೆ. ಸರ್ಕಾರ ಬಂದು 8 ತಿಂಗಳಾದ್ರೂ ಅಧಿಕಾರವನ್ನ ಕೊಟ್ಟಿಲ್ಲ. ಅಲ್ಲಿಗೆ ಹೋಗಿ ನಮ್ಮ ಕತೆ ಏನಾಯ್ತು ಎಂದು ಯೋಚಿಸಲಿ ಎಂದು ಟಾಂಗ್ ನೀಡಿದರು.
Key words: no guarantee - India -alliance -will be -united- R. Ashok