HomeBreaking NewsLatest NewsPoliticsSportsCrimeCinema

ಹಿರೇಮಗಳೂರು ಕಣ್ಣನ್ ಗೆ ನೀಡಿರುವ ನೋಟಿಸ್ ಹಿಂಪಡೆಯಲು ಸೂಚನೆ- ಸಚಿವ ರಾಮಲಿಂಗರೆಡ್ಡಿ.

05:09 PM Jan 23, 2024 IST | prashanth

ಬೆಂಗಳೂರು, ಜನವರಿ 23,2024(www.justkannada.in):  ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕರಾದ  ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯುವಂತೆ ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡುವುದಾಗಿ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಹಿರೇಮಗಳೂರು ಕಣ್ಣನ್ ಅವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 7500 ರೂ. ವೇತನ ನೀಡುತ್ತಿತ್ತು. ಆದರೆ, ಇದೀಗ ದೇವಾಲಯದ ಆದಾಯ ಕಡಿಮೆ‌ ಇದೆ ಎಂಬ ಕಾರಣ ನೀಡಿ ಈ ಹಿಂದೆ ನೀಡಿದ್ದ 7500 ರೂ. ವೇತನದಲ್ಲಿ 4500 ರೂ. ಅನ್ನು ವಾಪಸ್ ನೀಡುವಂತೆ ಸೂಚಿಸಲಾಗಿತ್ತು. 4500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು ವಾಪಸ್ ನೀಡುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಇದಕ್ಕೆ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಇದೀಗ ನೋಟಿಸ್ ಹಿಂಪಡೆಯಲು ಸೂಚನೆ ನೀಡಿರುವುದಾಗಿ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ಥಳೀಯ ತಹಶೀಲ್ದಾರ್‌ ತಪ್ಪು ತೀರ್ಮಾನದಿಂದ ನೋಟಿಸ್ ಜಾರಿಯಾಗಿದೆ. ಅದನ್ನು ಹಿಂಪಡೆಯುತ್ತೇವೆ ಎಂದಿದ್ದಾರೆ.

Key words: Notice - withdraw - Hiremagaluru Kannan- Minister- Ramalingareddy.

Tags :
Notice - withdraw - Hiremagaluru Kannan- Minister- Ramalingareddy.
Next Article