For the best experience, open
https://m.justkannada.in
on your mobile browser.

ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಶಾಕ್: ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹ

12:29 PM Aug 07, 2024 IST | prashanth
ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಶಾಕ್  ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹ

ಪ್ಯಾರಿಸ್,ಆಗಸ್ಟ್,7,2024 (www.justkannada.in): ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಿದ್ದ ಭಾರತದ ಕುಸ್ತಿಪಟು ವಿನೇಶ್ ಪೋಗಟ್ ಗೆ   ಚಿನ್ನದ ಪದಕ ಗೆಲ್ಲುವ ಕನಸು  ಭಗ್ನಗೊಂಡಿದೆ.

ಹೌದು, ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ.

ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ತೂಕ ಹೊಂದಿದ್ದ ಹಿನ್ನೆಲೆಯಲ್ಲಿ ವಿನೇಶ್ ಪೋಗಟ್ ಅವರನ್ನ ಫೈನಲ್ ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ ವಿನೇಶ್ ಪೋಗಟ್ ಅವರಿಗೆ ಚೊಚ್ಚಲ ಒಲಂಪಿಕ್ಸ್ ಪದಕ ಕೈತಪ್ಪಿದಂತಾಗಿದೆ.

ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ವಿನೇಶ್ ಫೋಗಟ್ ಅವರ ತೂಕವು ನಿಗದಿತ ಮಿತಿಗಿಂತ 100 ಗ್ರಾಂ ಹೆಚ್ಚು ಎಂದು ಕಂಡುಬಂದಿದೆ. ನಿಯಮಗಳ ಪ್ರಕಾರ, ಯಾವುದೇ ಕುಸ್ತಿಪಟುವಿಗೆ ಯಾವುದೇ ವಿಭಾಗದಲ್ಲಿ 100 ಗ್ರಾಂ ಹೆಚ್ಚುವರಿ ತೂಕದ ಭತ್ಯೆ ನೀಡಲಾಗುತ್ತದೆ. ಆದರೆ ವಿನೇಶ್ ಅವರ ತೂಕ ಇದಕ್ಕಿಂತ ಹೆಚ್ಚಿದೆ ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ ಎನ್ನಲಾಗಿದೆ. ಇನ್ನು ಒಲಂಪಿಕ್ಸ್ ತೀರ್ಪುಗಾರರ ವಿರುದ್ದ ಭಾರತ ಆಕ್ರೋಶ ವ್ಯಕ್ತಪಡಿಸಿದೆ.

Key words: Olympics, India, Wrestler, Vinesh Pogat, disqualified

Tags :

.