ಕ್ಯಾನ್ಸರ್ ಆರೈಕೆಯನ್ನು ಹೆಚ್ಚಿಸಲು " ಆಂಕೊ ಕೇರ್" ಎಂಬ ಹೊಸ ಮೊಬೈಲ್ ಅಪ್ಲಿಕೇಶನ್.
ಮೈಸೂರು,ಏಪ್ರಿಲ್, 17,2024 (www.justkannada.in): ಮೈಸೂರಿನ ಜೆಎಸ್ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ, ಸಮುದಾಯ ವೈದ್ಯಕೀಯ ವಿಭಾಗ ಮತ್ತು ಆಂಕೊಲಾಜಿ ವಿಭಾಗಗಳು " ಆಂಕೊ ಕೇರ್" ಎಂಬ ಹೊಸ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಿದರು.
ONCO CARE ಅಪ್ಲಿಕೇಶನ್ ಫ್ಲೈಯರ್‌ಗಳು ಮತ್ತು QR ಕೋಡ್ ಅನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಮ್ಯುನಿಟಿ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ.ಸುನೀಲ್ ಕುಮಾರ್ ಡಿ ಮತ್ತು ವೈದ್ಯಕೀಯ ಆಂಕೊಲಾಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಕಿರಣ್ ಪಿ.ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು .
ಕಮ್ಯುನಿಟಿ ಮೆಡಿಸಿನ್ ವಿಭಾಗದ ಪಿಎಚ್‌ಡಿ ಪದವೀಧರ ವಿದ್ಯಾರ್ಥಿ ಡಾ. ಹರಿ ಪ್ರಕಾಶ್ ಅಭಿವೃದ್ಧಿಪಡಿಸಿದ ಈ ಅಪ್ಲಿಕೇಶನ್ ಅನ್ನು ಬಳಕೆದಾರರ ಸ್ನೇಹಿಯಾಗಿ ವಿನ್ಯಾಸಗೊಳಿಸಿದ್ದಾರೆ.
ಸಮಾರಂಭದಲ್ಲಿ ಕಮ್ಯುನಿಟಿ ಮೆಡಿಸಿನ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಶ್ವೇತಾಶ್ರೀ ಎಂ, ಪಿಎಚ್‌ಡಿ ಪದವೀಧರ ವಿದ್ಯಾರ್ಥಿ ಡಾ.ದೀಪಿಕಾ ಯಾದವ್, ಸ್ನಾತಕೋತ್ತರ ಪದವೀಧರ ವಿದ್ಯಾರ್ಥಿಗಳಾದ ಡಾ.ರಾಕೇಶ್, ಡಾ.ಪ್ರಗಡೇಶ್ ಮತ್ತು ವೈದ್ಯಕೀಯ ಆಂಕೊಲಾಜಿ ವಿಭಾಗದ ವೃತ್ತಿಪರರು, ಶುಶ್ರೂಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು, ರೋಗಿಗಳು ಮತ್ತು ಅವರ ಪರಿಚಾರಕರು ಸಮಾರಂಭದಲ್ಲಿ ಭಾಗವಹಿಸಿದ್ದರು.
ONCO CARE ಅಪ್ಲಿಕೇಶನ್ Google Play Store ನಲ್ಲಿ ಉಚಿತವಾಗಿ ಲಭ್ಯವಿದೆ (https://play.google.com/store/apps/details?id=io.ionic.oncocare).
Key words: ONCO CARE, new,mobile, app