For the best experience, open
https://m.justkannada.in
on your mobile browser.

'ಪೂರೈಸಿದ್ದು ವರುಷ ಮಾತ್ರ ಆದರೆ, ಸಾಧಿಸಿದ್ದು ಶೂನ್ಯ-ಬಿವೈ ವಿಜಯೇಂದ್ರ ಟೀಕೆ.

10:33 AM May 20, 2024 IST | prashanth
 ಪೂರೈಸಿದ್ದು ವರುಷ ಮಾತ್ರ ಆದರೆ  ಸಾಧಿಸಿದ್ದು ಶೂನ್ಯ ಬಿವೈ ವಿಜಯೇಂದ್ರ ಟೀಕೆ

ಬೆಂಗಳೂರು, ಮೇ,20,2024 (www.justkannada.in):  ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಅಧಿಕಾರಿಕ್ಕೆ ಬಂದು ಇಂದಿಗೆ ಒಂದು ವರ್ಷ ಕಳೆದಿದ್ದು ಸರ್ಕಾರದ ಸಾಧನೆಯ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಟೀಕಿಸಿ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ, 'ಪೂರೈಸಿದ್ದು ವರುಷ ಮಾತ್ರ ಆದರೆ, ಸಾಧಿಸಿದ್ದು ಶೂನ್ಯ. ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ' ಎಂದು ಕಿಡಿಕಾರಿದ್ದಾರೆ.

ರಾಜ್ಯದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್​ ಸರ್ಕಾರ ಒಂದು ವರ್ಷದಲ್ಲಿ ಬಿಟ್ಟಿ ಭಾಗ್ಯಗಳಿಗಾಗಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮ, ನಿರುದ್ಯೋಗ ಭವಣೆ ಹೆಚ್ಚಾಗಿದೆ. ಶಿಕ್ಷಣ ಕ್ಷೇತ್ರ ಎಡವಿ ಬಿದ್ದಿತು, ಉತ್ಪನ್ನ ಕ್ಷೇತ್ರ ಸೊರಗಿತು. ನಾರಿ ಕುಲ ರಕ್ಷಣೆ ಇಲ್ಲದೆ ನಲುಗಿತು, ಬೆಳೆಯೆಲ್ಲ ಒಣಗಿತು. ದಲಿತ ಕಲ್ಯಾಣ ಕಾರ್ಯಗಳು ಕುಸಿಯಿತು. ಹಿಂದುಳಿದವರ ಅಭಿವೃದ್ಧಿ ಹಿಂದುಳಿಯಿತು. ರೈತರ ಬಾಳು ಗೋಳಾಯಿತು ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

Key words:  One year - Congress government- BY Vijayendra

Tags :

.