HomeBreaking NewsLatest NewsPoliticsSportsCrimeCinema

ಪ್ರಧಾನಿ ಮೋದಿ ಅವರಿಂದ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮ: 4 ಸಾವಿರ ವಿದ್ಯಾರ್ಥಿಗಳು ಭಾಗಿ.

11:58 AM Jan 29, 2024 IST | prashanth

ನವದೆಹಲಿ,ಜನವರಿ,29,2024(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಇಂದು 7ನೇ ಆವೃತ್ತಿಯ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮ ನಡೆಸುತ್ತಿದ್ದು ಪರೀಕ್ಷೆ ಎದುರಿಸುವ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.

ದೆಹಲಿ ಭಾರತ್ ಮಂಟಪಂನಲ್ಲಿ ಪರೀಕ್ಷಾ  ಪೆ ಚರ್ಚಾ ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ 4000 ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.  ಪರೀಕ್ಷೆ ಎದುರಿಸುವ ಬಗ್ಗೆ ವಿದ್ಯಾರ್ಥಿಗಳಿಗೆ  ಮೋದಿ ಪಾಠ ಮಾಡುತ್ತಿದ್ದಾರೆ. ಪರೀಕ್ಷೆ ವೇಳೆ ಒತ್ತಡ ಆತಂಕ  ನಿವಾರಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ  ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಸಲಹೆ  ನೀಡಿದ್ದಾರೆ.

ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಭಯ ಹೋಗಲಾಡಿಸುವುದು, ಉತ್ತಮ ಅಭ್ಯಾಸ, ಪಠ್ಯವನ್ನು ನೆನಪಿಟ್ಟುಕೊಳ್ಳುವ ಪರಿ ಹೀಗೆ ಯಶಸ್ಸಿನ ಮಂತ್ರವನ್ನು ವಿದ್ಯಾರ್ಥಿಗಳಿಗೆ ತಿಳಿಸಲು ಪ್ರಧಾನಿ ಮೋದಿ 2018ರಲ್ಲಿ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವನ್ನು ಆರಂಭಿಸಿದ್ದರು.

Key words: pariksha pe charcha–PM Modi-4 thousand -students -participated.

Tags :
pariksha pe charcha–PM Modi-4 thousand -students -participated.
Next Article